
ಬೆಂಗಳೂರು, [ಮಾ.08]: ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ.
10 ಸೀಟನ್ನಾದರೂ ಕೊಡಿ ಎಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದ್ರೆ ಕಾಂಗ್ರೆಸ್ 6 ಸೀಟುಗಳನ್ನು ಬಿಟ್ಟುಕೊಡಲು ಒಪ್ಪಿಕೊಂಡಿದೆ. ಈ ಎಲ್ಲದರ ನಡುವೆ ಮೈತ್ರಿ ಪಕ್ಷಗಳಿಗೆ ಮಂಡ್ಯ ಕ್ಷೇತ್ರ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಕಾಂಗ್ರೆಸ್ ಟಿಕೆಟ್‌ಗಾಗಿ ಕೊನೆ ಕ್ಷಣದವರೆಗೆ ಕಾಯುತ್ತೇನೆ: ಸುಮಲತಾ
ಜೆಡಿಎಸ್ ಮಂಡ್ಯ ಕ್ಷೇತ್ರವನ್ನು ಸುಮಲತಾ ಅಂಬರೀಶ್‌ಗೆ ಬಿಟ್ಟುಕೊಡಲು ಒಪ್ಪಿಗೆ ನೀಡಿಲ್ಲ. ಆದ್ದರಿಂದ, ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದಾರೆ.
ಇದ್ರಿಂದ ಜೆಡಿಎಸ್ ಗೆ ಸೋಲಿನ ಭಯ ಶುರುವಾಗಿದ್ದು, ಹೇಗಾದರೂ ಮಾಡಿ ಸುಮಲತಾ ಅವರನ್ನು ಮಂಡ್ಯದಿಂದ ಸ್ಪರ್ಧಿಸದಂತೆ ನೋಡಿಕೊಳ್ಳಬೇಕೆಂದು ಜೆಡಿಎಸ್ ನಾಯಕರು ಕಾಂಗ್ರೆಸ್ ಗೆ ತಾಕೀತು ಮಾಡುತ್ತಿದ್ದಾರೆ.
ಸುಮಲತಾ ಅಂಬರೀಶ್‌ಗೆ ಮಂಡ್ಯ ಬಿಟ್ಟು ಬೇರೆ ಕ್ಷೇತ್ರ ಆಫರ್ ಮಾಡಿದ ಕಾಂಗ್ರೆಸ್
ದೇವೇಗೌಡರ ಕುಟುಂಬದ ಕುಡಿ ನಿಖಿಲ್ ಕುಮಾರಸ್ವಾಮಿಯವರನ್ನು ಮಂಡ್ಯದಿಂದ ಸಕ್ರಿಯ ರಾಜಕಾರಣಕ್ಕೆ ತರಲು ಜೆಡಿಎಸ್ ಚಿಂತಿಸಿದೆ. ಇದಕ್ಕೆ ಸುಮಲತಾ ಅಡ್ಡಗಾಲಾಗಿ ನಿಂತಿದ್ದಾರೆ.
ಇದ್ರಿಂದ ಸುಮಲತಾ ಅಂಬರೀಶ್ ಅವರಿಗೆ ಮೈಸೂರು-ಕೊಡಗು ಕ್ಷೇತ್ರದಿಂದ ಟಿಕೆಟ್ ನೀಡಲು ಮೈತ್ರಿ ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಾದದರೆ ಮಂಡ್ಯದಿಂದ ಮಾತ್ರ ಎಂದು ಈಗಾಗಲೇ ಸುಮಲತಾ ಅಂಬರೀಶ್ ಅವರು ಸ್ಪಷ್ಟಪಡಿಸಿದ್ದು, ರಾಜಕೀಯಕ್ಕೆ ಬರೋದಾದ್ರೆ ಮಂಡ್ಯದಿಂದಲೇ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಅಥವಾ ಬೆಂಗಳೂರು ಉತ್ತರ ಕ್ಷೇತ್ರದಿಂದ ನಿಲ್ಲುವಂತೆ ಕಾಂಗ್ರೆಸ್ ಆಫರ್ ಮಾಡಿತ್ತು. ಆದ್ರೆ ಅದನ್ನು ಸುಮಲತಾ ಅಂಬರೀಶ್ ಅವರು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಅಷ್ಟದರೂ ಇದೀಗ ಮೈಸೂರು-ಕೊಡಗು ಕ್ಷೇತ್ರ ಆಫರ್ ನೀಡಲು ಮುಂದಾಗಿದೆ. ಆದ್ರೆ, ಇದಕ್ಕೆ ಸುಮಲತಾ ಅವರು ಏನು ಹೇಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.