ಶಿವಮೊಗ್ಗ ಬೈ ಎಲೆಕ್ಷನ್: ಮಧು ಬಂಗಾರಪ್ಪ ಶಕ್ತಿ ಪ್ರದರ್ಶನಕ್ಕೆ ಮೈತ್ರಿ ಪಕ್ಷಗಳು ಸಜ್ಜು

By Web DeskFirst Published Oct 15, 2018, 2:03 PM IST
Highlights

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಮತ್ತೋರ್ವ ಮಾಜಿ ಮುಖ್ಯಮಂತ್ರಿ ಪುತ್ರ ಮಧು ಬಂಗಾರಪ್ಪ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವುದರಿಂದ ಮದಗಜಗಳ ಕಾದಾಟಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಜ್ಜಾಗಿದೆ.

ಶಿವಮೊಗ್ಗ[ಅ.15]: ಲೋಕಸಭಾ ಉಪಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಸ್ಪರ್ಧಿಸುತ್ತಿದ್ದು, ನಾಳೆ ಅಂದರೆ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ವಿದೇಶದಿಂದ ವಾಪಸ್ಸಾಗುವುದು ವಿಳಂಬವಾದ ಹಿನ್ನಲೆಯಿಂದಾಗಿ ನಾಳೆ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳವಾರ ಮೈತ್ರಿಪಕ್ಷದ ಶಕ್ತಿ ಪ್ರದರ್ಶನಕ್ಕೆ ಶಿವಮೊಗ್ಗ ಸಾಕ್ಷಿಯಾಗಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್ ಹಿರಿಯ ಮುಖಂಡರಾದ ಆರ್.ವಿ ದೇಶಪಾಂಡೆ, ದಿನೇಶ್ ಗುಂಡೂರಾವ್, ಜಯಮಾಲ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಇದನ್ನು ಓದಿ: ಶಿವಮೊಗ್ಗದಲ್ಲಿ 3 ಮಾಜಿ ಸಿಎಂ ಪುತ್ರರ ಕದನ: ಗೆಲ್ಲೋರ್‍ಯಾರು..?

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಮತ್ತೋರ್ವ ಮಾಜಿ ಮುಖ್ಯಮಂತ್ರಿ ಪುತ್ರ ಮಧು ಬಂಗಾರಪ್ಪ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವುದರಿಂದ ಮದಗಜಗಳ ಕಾದಾಟಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಜ್ಜಾಗಿದೆ. ಆರಂಭದಲ್ಲಿ ಶಿವಮೊಗ್ಗ ಲೋಕಸಭಾ ಉಪಚುನಾವಣೆ ಬಗ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಇದೀಗ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಚುನಾವಣಾ ಅಖಾಡಕ್ಕೆ ಧುಮುಕಿರುವುದು ಚುನಾವಣಾ ಕಣ ರಂಗೇರುವಂತೆ ಮಾಡಿದೆ.

ಇದನ್ನು ಓದಿ: ರಂಗೇರುತ್ತಿರುವ ಉಪಚುನಾವಣಾ ಕದನ: ಕ್ಷೇತ್ರಗಳ ಚಿತ್ರಣ ಇಲ್ಲಿದೆ

ಶಿವಮೊಗ್ಗ ಕ್ಷೇತ್ರದಲ್ಲಿ ಈಡಿಗರ ಮತಗಳು ನಿರ್ಣಾಯಕವಾಗಿದ್ದರೂ ಲಿಂಗಾಯಿತ ಹಾಗೂ ಒಕ್ಕಲಿಗ ಮತಗಳು ಫಲಿತಾಂಶ ನಿರ್ಧರಿಸಲು ಪ್ರಮುಖ ಪಾತ್ರವಹಿಸಲಿದೆ. ಮಧು ಬಂಗಾರಪ್ಪ ಈಡಿಗ, ಒಕ್ಕಲಿಗ ಹಾಗೂ ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟಿದ್ದರೆ, ಬಿಜೆಪಿ ಲಿಂಗಾಯತ ಮತಗಳನ್ನು ನೆಚ್ಚಿಕೊಂಡಿದೆ. 

click me!