ಚಿಂಚೋಳಿ, ಕುಂದಗೋಳ ಉಪಚುನಾವಣೆ ಗೆಲುವಿಗಾಗಿ ‘ಕೈ’ ಉಸ್ತುವಾರಿಗಳ ನೇಮಕ

By Web Desk  |  First Published Apr 27, 2019, 8:32 PM IST

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ಎರಡು ಕ್ಷೇತ್ರಗಳ ಉಪ ಚುನಾವಣೆಯತ್ತ ಗಮನಹರಿಸಿದೆ. ಮೇ 19ರಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಈ ಎರಡು ಕ್ಷೇತ್ರಗಳನ್ನ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ತನ್ನ ಉಸ್ತುವಾರಿಗಳನ್ನು ನೇಮಿಸಿದೆ.


ಬೆಂಗಳೂರು, [ಏ.27]: ಇದೆ ಮೇ 19 ರಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. 

ಉಮೇಶ್ ರಾಜೀನಾಮೆಯಿಂದ ತೆರವಾದ ಕಲಬುರಗಿ ಜಿಲ್ಲೆ ಚಿಂಚೋಳಿ ಹಾಗೂ ಸಿ.ಎಸ್ .ಶಿವಳ್ಳಿ ನಿಧನದಿಂದ ತೆರವಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭೆ  ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. 

Latest Videos

undefined

ಈ ಉಪಚುನಾವಣೆಗೂ ಮೈತ್ರಿ ಮುಂದುವರಿಸಿರುವ ಕಾಂಗ್ರೆಸ್​ ಹಾಗೂ ಜೆಡಿಎಸ್​​ ತಮ್ಮ ಅಭ್ಯರ್ಥಿಯ ಗೆಲುವಿಗಾಗಿ ರಣತಂತ್ರವನ್ನ ರೂಪಿಸಿದ್ದಾರೆ. ಅದರಂತೆ ಇಂದು [ಶನಿವಾರ] ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಿತು.

ಚಿಂಚೋಳಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಅಂತಿಮ

ಈ ಸಭೆಯಲ್ಲಿ ಎರಡೂ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯನ್ನ ನೇಮಕ ಮಾಡಲಾಗಿದೆ. ಕುಂದಗೋಳ ಕ್ಷೇತ್ರಕ್ಕೆ ಸಚಿವ ಡಿ.ಕೆ.ಶಿವಕುಮಾರ್, ಚಿಂಚೋಳಿಗೆ ಡಿಸಿಎಂ ಡಾ.ಜಿ ಪರಮೇಶ್ವರ್ ಅವರನ್ನ ಉಸ್ತುವಾರಿಯನ್ನಾಗಿ ಕಾಂಗ್ರೆಸ್​ ಹೈಕಮಾಂಡ್ ನೇಮಕ ಮಾಡಿದೆ. 

ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸಭೆ ಜರುಗಿತು.

ರಾಜ್ಯ ಉಸ್ತುವಾರಿ , ಕೆಪಿಸಿಸಿ ಅಧ್ಯಕ್ಷರಾದ ,
ಮಾಜಿ ಸಿಎಂ ,
ಡಿಸಿಎಂ , , ಸಚಿವರುಗಳು ಮತ್ತು ಹಿರಿಯ ನಾಯಕರುಗಳು ಭಾಗವಹಿಸಿದ್ದರು. pic.twitter.com/O9i1kVKuwW

— Karnataka Congress (@INCKarnataka)

ಜೊತೆಗೆ ಬೀದರ್, ಕಲಬುರಗಿ, ಬಳ್ಳಾರಿ ಭಾಗದ ಸಚಿವರೆಲ್ಲರಿಗೂ ಉಪಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆಯನ್ನ ನೀಡಲಾಗಿದ್ದು, ಉಪಚುನಾವಣೆ ಮುಗಿಯುವವರೆಗೂ ಕ್ಷೇತ್ರಗಳಲ್ಲೇ ಉಳಿದುಕೊಂಡು ಗೆಲುವಿಗಾಗಿ ತಂತ್ರ ರೂಪಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. 

 ಕುಂದಗೋಳ ಕ್ಷೇತ್ರದಿಂದ ಕುಸುಮಾ ಶಿವಳ್ಳಿ ಸ್ಪರ್ಧೆ ಖಚಿತವಾಗಿದ್ದು, ಚಿಂಚೋಳಿ ಕ್ಷೇತ್ರದಿಂದ ಶುಭಾಷ್ ರಾಥೋಡ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.  

click me!