
ಮೈಸೂರು (ಏ. 07): ಹೊಳೆನರಸಿಪುರದಲ್ಲಿ ರೇವಣ್ಣ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದ ಬಿ.ಪಿ.ಮಂಜೆಗೌಡರ ರಾಜೀನಾಮೆ ಅಂಗೀಕಾರಕ್ಕೆ ಕಾನೂನು ಇಲಾಖೆ ಅಡ್ಡಿ ವ್ಯಕ್ತಪಡಿಸಿದೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಬಿ.ಪಿ.ಮಂಜೇಗೌಡ ಚುನಾವಣೆಗೆ ಸ್ಪರ್ಧೆ ಮಾಡಲು ಮುಂದಾಗಿದ್ದರು. ಮಂಜೇಗೌಡರ ವಿರುದ್ಧ ಲೋಕಾಯುಕ್ತ ಪ್ರಕರಣವಿರುವ ಹಿನ್ನೆಲೆಯಲ್ಲಿ ರಾಜೀನಾಮೆಯನ್ನು ಅಂಗೀಕಾರ ಮಾಡಲು ಸಾಧ್ಯವಿಲ್ಲ ಎಂದು ಕಾನೂನು ಇಲಾಖೆ ಅಭಿಪ್ರಾಯಪಟ್ಟಿದೆ.
ಕ್ರಿಮಿನಲ್ ಪ್ರಕರಣದ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ರಾಜೀನಾಮೆ ಅಂಗೀಕಾರಕ್ಕೆ ಸಾಧ್ಯವಿಲ್ಲ. ರಾಜೀನಾಮೆ ಅಂಗೀಕಾರಕ್ಕೆ ನಿಯಮಾವಳಿಗಳು ಇಲ್ಲದ ಕಾರಣಕ್ಕೆ ಅಂಗೀಕಾರ ಸಾಧ್ಯವಿಲ್ಲ ಎಂದು ಡಿಪಿಎಆರ್ ಗೆ ಕಾನೂನು ಇಲಾಖೆ ಅಭಿಪ್ರಾಯ ತಿಳಿಸಿದೆ. ರಾಜೀನಾಮೆ ಅಂಗೀಕಾರಕ್ಕೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಕಸರತ್ತು ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.