
ಕಲಬುರಗಿ : ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ.
ಕಾಂಗ್ರೆಸ್ ಅಭ್ಯರ್ಥಿ ಸುಬಾಷ ರಾಠೋಡ್ ಮತ್ತು ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಬಿರುಸಿನ ಪ್ರಚಾರ ಕೈಗೊಳ್ಳುತ್ತಿದ್ದಾರೆ.
ಈ ನಡುವೆ ಪಕ್ಷಾಂತರ ಪರ್ವ ಸಹ ಮುಂದುವರೆದಿದ್ದು, ಒಂದೆಡೆ ನೂರಾರು ಯುವಕರು ಬಿಜೆಪಿಗೆ ಸೇರ್ಪಡೆಯಾದರೆ, ಇನ್ನೊಂದೆಡೆ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿಯ ಪ್ರಚಾರ ಸಮಾವೇಶಗಳಲ್ಲಿ ಆಯಾ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವೇ ಪ್ರಮುಖವಾಗುತ್ತಿದೆ. ತಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಮುಖಂಡರು ಪಕ್ಷದ ಧ್ವಜ ನೀಡುವುದು, ಪಕ್ಷದ ಗುರುತಿನ ಶಾಲು ಹಾಕಿ ಬರಮಾಡಿಕೊಳ್ಳುವುದು ಸಾಮಾನ್ಯವಾಗಿದೆ.
ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಕೂಡ ಉಪಚುನಾವಣೆ ತೀವ್ರ ಪ್ರತಿಷ್ಠೆ ಪ್ರಶ್ನೆಯಾಗಿರುವುದರಿಂದ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.