ಇಂದು ಭಾರತ್ ಬಂದ್ : ಯಾವ ಸೇವೆ ವ್ಯತ್ಯಯ

By Web Desk  |  First Published Sep 10, 2018, 6:54 AM IST

ಪೆಟ್ರೋಲ್ ಡೀಸೆಲ್ ದರ ಏರಿಕೆಯನ್ನು ಖಂಡಿಸಿ ಇಂದು ದೇಶದಲ್ಲಿ ವಿಪಕ್ಷಗಳು ಬಂದ್ ಗೆ ಕರೆ ನೀಡಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಹಲವು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. 


ಬೆಂಗಳೂರು :  ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿವೆ. ಈಗಾಗಲೇ ಕೆಲ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟು ಸಾರಿಗೆ - ಸಂಪರ್ಕ ವ್ಯವಸ್ಥೆ ಬಂದ್ ಆಗಿದೆ. 

ಬಂದ್’ನಿಂದ ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆ, ಆ್ಯಪ್ ಆಧರಿತ ಟ್ಯಾಕ್ಸಿ , ಏರ್ ಪೋರ್ಟ್ ಟ್ಯಾಕ್ಸಿ, ಆಟೋ ಸೇವೆ ಸೇರಿದಂತೆ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗಿದೆ.  ಆದರೆ ಹಣ್ಣು, ತರಕಾರಿ, ಹಾಲು, ಔಷಧಿ, ಆಸ್ಪತ್ರೆ ಸೇರಿದಂತೆ ಅಗತ್ಯ ಸೇವೆಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ. ಇನ್ನು ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.

Tap to resize

Latest Videos

ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿರುವುದರಿಂದ ಬಂದ್ ತೀವ್ರವಾಗುವ ಸಾಧ್ಯತೆ ಇದೆ. ಉಭಯ ಪಕ್ಷಗಳ ಕಾರ್ಯಕರ್ತರು ರಾಜ್ಯಾದ್ಯಂತ ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆ, ಮೆರವಣಿಗೆ ನಡೆಸಲಿದ್ದಾರೆ. ಬಂದ್ ತೀವ್ರಗೊಳ್ಳುವ ಮುನ್ಸೂಚನೆ ಅರಿತು ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿ

ಎಲ್ಲೆಲ್ಲಿ ಶಾಲಾ ಕಾಲೇಜಿಗೆ ರಜೆ

ತುಮಕೂರು, ರಾಯಚೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಗದಗ, ಹಾವೇರಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ಬೆಳಗಾವಿ 

ಎಲ್ಲೆಲ್ಲಿ ರಜೆ ಇಲ್ಲ? 
ಕೊಡಗು, ಬೀದರ್ ಈ ಸೇವೆ ಅಲಭ್ಯ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸೇವೆ, ಆ್ಯಪ್ ಆಧರಿತ ಟ್ಯಾಕ್ಸಿ, ಆಟೋ ಈ ಸೇವೆ ಲಭ್ಯ ಪೆಟ್ರೋಲ್ ಬಂಕ್,
ರೆಸ್ಟೋರೆಂಟ್, ಹೋಟೆಲ್, ಚಿತ್ರಮಂದಿರ, ಬ್ಯಾಂಕ್ ಸೇವೆ, ವಿಮಾನ, ರೈಲು, ನಮ್ಮ ಮೆಟ್ರೋ, ಸರಕು ಸಾಗಣೆ ವಾಹನ, ಪ್ರವಾಸಿ ವಾಹನಗಳು

ಬಂದೋಬಸ್ತ್ :  ‘ಭಾರತ್ ಬಂದ್’ಗೆ ರಾಜ್ಯವ್ಯಾಪಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಒತ್ತಾಯಪೂರ್ವಕವಾಗಿ ಬಂದ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ 15 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಕಮಲ್ ಪಂತ್ ಹೇಳಿದ್ದಾ

click me!