‘ಚಿದಂಬರ’ರಹಸ್ಯ: ಲೋಕಸಭೆ ಚುನಾವಣೆಯಲ್ಲಿ ಕೈ ಗೆಲ್ಲೋದು ಎಷ್ಟು ಸೀಟು?

Published : Jul 22, 2018, 08:04 PM IST
‘ಚಿದಂಬರ’ರಹಸ್ಯ: ಲೋಕಸಭೆ ಚುನಾವಣೆಯಲ್ಲಿ ಕೈ ಗೆಲ್ಲೋದು ಎಷ್ಟು ಸೀಟು?

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 150 ಸ್ಥಾನ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಭರವಸೆ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿಗೆ ಕರೆ ಪಕ್ಷ ಸಂಘಟನೆಗೆ ಕರೆ ನೀಡಿದ ರಾಹುಲ್ 

ನವದೆಹಲಿ(ಜು.22): ಕಳೆದ ಲೋಕಸಭೆ ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ. 

ನವದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಾತನಾಡಿದ ಚಿದಂಬರಂ, ದೇಶದ 12 ರಾಜ್ಯಗಳಲ್ಲಿ ಈಗಲೂ ಕಾಂಗ್ರೆಸ್ ಪ್ರಬಲವಾಗಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ರಾಜ್ಯಗಳಿಂದ 150 ಸೀಟುಗಳನ್ನು ಗೆಲ್ಲಬಹುದು. ಉಳಿದ ಸ್ಥಾನಗಳನ್ನು ಪ್ರಾದೇಶಿಕ ಪಕ್ಷಗಳು ಗೆಲ್ಲಬಹುದಾಗಿದ್ದು, ಅವುಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಬಹುದು ಎಂದು ಸಲಹೆ ನೀಡಿದ್ದಾರೆ.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತಳ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾದ ದೊಡ್ಡ ಸವಾಲು ನಮ್ಮ ಮುಂದಿದೆ. ಪ್ರತಿ ಕ್ಷೇತ್ರದಲ್ಲೂ ನಮ್ಮ ವಿರುದ್ಧ ಮತ ಚಲಾಯಿಸುವ ಮತದಾರರ ನಂಬಿಕೆ ಗೆಲುವುದು ಅಗತ್ಯ ಈ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತನು ಮಾಡಬೇಕು ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌