ಬಿಎಸ್‌ವೈ ನೀರು ಕೊಡ್ತಿನಿ ಎಂದಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು!

By Web Desk  |  First Published Oct 24, 2019, 4:13 PM IST

ಬಿಎಸ್‌ವೈ ನೀರು ಕೊಡ್ತಿನಿ ಎಂದಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು| ಗಡಿ ಭಾಗದ ಜತ್ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ ವಿಕ್ರಮ್ ಸಾವಂತ್| ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಕೃಷ್ಣಾ ನದಿಯಿಂದ ನೀರು ಕೊಡುವುದಾಗಿ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ | ಯಡಿಯೂರಪ್ಪ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ರೈತ ಸಂಘಟನೆಗಳು| ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ್ ಪರ ಪ್ರಚಾರ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ|


ಜತ್(ಅ.24): ತೀವ್ರ ಕುತೂಹಲ ಮೂಡಿಸಿರುವ ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ  ಮುನ್ನಡೆ ಸಾಧಿಸಿದ್ದು, ಹರಿಯಾಣದಲ್ಲಿ ಮಾತ್ರ ಆಡಳಿತಾರೂಢ ಬಿಜೆಪಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾದಂತಿದೆ.

ಹರಿಯಾಣದ ಕುಮಾರಸ್ವಾಮಿ ಆಗ್ತಾರಾ ದುಷ್ಯಂತ್: ದೋಸ್ತಿ ಬಯಸಿದೆ ಕಾಂಗ್ರೆಸ್!

Latest Videos

undefined

ಒಟ್ಟು 288 ಸೀಟುಗಳ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 160 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್-ಎನ್‌ಸಿಪಿ 100   ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 27 ಕ್ಷೇತ್ರಗಳಲ್ಲಿ ಮುಂದಿದ್ದಾರೆ.

ಶಿವಸೇನೆ'ಮಹಾ'ಬೇಡಿಕೆ: ಸಾಧ್ಯನಾ ಆದಿತ್ಯ ಠಾಕ್ರೆ ಸಿಎಂ ಆಗೋಕೆ?

ಖಟ್ಟರ್ ಕರೆಸಿಕೊಂಡ ಶಾ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಭರಾಲಾ ರಾಜೀನಾಮೆ!

ಆದರೆ ಮಹಾರಾಷ್ಟ್ರದಲ್ಲಿ ಬಿಜೆಪಿ ನಿರೀಕ್ಷಿತ ಸಾಧನೆ ಮಾಡಲಾಗಿಲ್ಲ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 100 ಕ್ಷೇತ್ರಗಳಲ್ಲಿ  ಮುನ್ನಡೆ ಸಾಧಿಸಿದ್ದು, ಮಿತ್ರಪಕ್ಷ ಶಿವಸೇನೆ 60 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಹರಿಯಾಣ, ಮಹಾರಾಷ್ಟ್ರ ಸದ್ಯದ ಬಲಾಬಲ: ಇದು ಚುನಾವಣಾ ರಣರಂಗದ ಕುತೂಹಲ!

ನನಗೆ ಸಿಎಂ ಪಟ್ಟ ಕೊಡುವ ಪಕ್ಷಕ್ಕೆ ಬೆಂಬಲ: ಚೌಟಾಲಾ ಒಲಿಸಲು ಬಿಜೆಪಿ-ಕಾಂಗ್ರೆಸ್ ಹಂಬಲ!

ಈ ಮಧ್ಯೆ  ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದ ಅಖಾಡಕ್ಕೆ ಧುಮುಕಿದ್ದ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಕರ್ನಾಟಕದ ಕೃಷ್ಣಾ ನದಿಯಿಂದ ನೀರು ಕೊಡುವುದಾಗಿ ಗಡಿ ಭಾಗದ ಜತ್ ಕ್ಷೇತ್ರದ ಮತದಾರರಿಗೆ ಮನವಿ ಮಾಡಿದ್ದರು.

ಮಹಾರಾಷ್ಟ್ರಕ್ಕೆ ರಾಜ್ಯದಿಂದ ನೀರು! BSY ಘೋಷಣೆಗೆ ತಿರುಗಿ ಬಿದ್ದ ರೈತರು!

ಆದರೆ ಜತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ್  ಜಯಭೇರಿ ಬಾರಿಸಿದ್ದು, ಮಹಾರಾಷ್ಟ್ರದಲ್ಲಿ ಯಡಿಯೂರಪ್ಪ ಪ್ರಚಾರ ನಿರೀಕ್ಷಿತ ಫಲಿತಾಂಶ ತಂದು ಕೊಡುವಲ್ಲಿ ವಿಫಲವಾಗಿದೆ.

ಆದರೆ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ್ ಪರ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ದರು. ಸ್ಥಳೀಯ ಸಮಸ್ಯೆಗಳ ಕುರಿತು ಸಿದ್ದರಾಮಯ್ಯ ಒತ್ತು ಕೊಟ್ಟು ಪ್ರಚಾರ ನಡೆಸಿದ್ದು, ವಿಕ್ರಮ್ ಸಾವಂತ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

ಜತ್ ಕ್ಷೇತ್ರದ ಮತದಾರರಿಗೆ ಕೃಷ್ಣಾ ನದಿ ನೀರು ಹರಿಸುವ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ ನಡೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವೋಟಿಗಾಗಿ ರಾಜ್ಯದ ಹಿತಾಸಕ್ತಿ ಬಲಿಕೊಡಬಾರದು ಎಂದು ರೈತ ಸಂಘಟನೆಗಳು ಸಿಎಂ ವಿರುದ್ಧ ಹರಿಹಾಯ್ದಿದ್ದನ್ನು ಇಲ್ಲಿ ಸ್ಮರಿಸಬಹುದು.

click me!