
ನವದೆಹಲಿ(ನ.05): ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದಕ್ಕೆ ಪ್ರಧಾನಿ ಮೋದಿ ಸಹಿ ಹಾಕದಿರಲು ನಮ್ಮ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.
ಮೋದಿ ಒಪ್ಪಂದದಿಂದ ಹಿಂದೆ ಸರಿಯಲು ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಹಾಕಿದ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರ ತೀವ್ರ ಒತ್ತಡದಿಂದ ಬಿಜೆಪಿ ಸರ್ಕಾರ ರೈತರು, ಹಾಲು ಉತ್ಪಾದಕರು, ಮೀನುಗಾರರು, ಸಣ್ಣ ಮತ್ತು ಮಧ್ಯಮ ವ್ಯವಹಾರಸ್ತರಿಗೆ ಮಾರಕವಾಗಲಿದ್ದ ಒಪ್ಪಂದದಿಂದ ಹಿಂದೆ ಸರಿದಿದೆ ಎಂದು ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.
ಭಾರತ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(RCEP) ಭಾಗವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು.
ನಿರಾಳ ತಂದ ಮೋದಿ ಘೋಷಣೆ: ಸಾಗರಾದಚೆಯಿಂದ ಸಿಹಿ ಸುದ್ದಿ ಕೊಟ್ಟ ಪ್ರಧಾನಿ!
ಆರ್‌ಸಿಇಪಿ ಒಪ್ಪಂದದ ಪ್ರಸ್ತುತ ರೂಪ ಮೂಲ ಮನೋಭಾವ ಮತ್ತು ಈ ಹಿಂದೆ ಒಪ್ಪಿದ ಮಾರ್ಗದರ್ಶಿ ಸೂತ್ರಗಳನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುವುದಿಲ್ಲ ಎಂದು ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.