
ಬೆಂಗಳೂರು : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರ ಸಚಿವ ಅನಂತಕುಮಾರ್‌ಗೆ ಉದಯ ಗರುಡಾಚಾರ್ .2 ಕೋಟಿ ಕಿಕ್‌ಬ್ಯಾಕ್ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿಯ ಐಟಿ ಸೆಲ್ ಮುಖ್ಯಚುನಾವಣಾಧಿಕಾರಿಗೆ ದೂರು ನೀಡಿದೆ.
ಬಿಜೆಪಿ ಮುಖಂಡ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎನ್.ಆರ್.ರಮೇಶ್, . 2 ಕೋಟಿ ಕಿಕ್‌ಬ್ಯಾಕ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗವಾಗಿಯೇ ಆರೋಪಿಸಿದ್ದರು. ಬಿಜೆಪಿ ಪಕ್ಷದವರೇ ಇಂತಹ ಗಂಭೀರ ಆರೋಪವನ್ನು ಕೇಂದ್ರ ಸಚಿವ ಅನಂತಕುಮಾರ್ ವಿರುದ್ಧ ಮಾಡಿದ್ದಾರೆ. ಚುನಾವಣೆಯಲ್ಲಿ ಪ್ರತಿ ಅಭ್ಯರ್ಥಿ ವೆಚ್ಚವನ್ನು . 28 ಲಕ್ಷಕ್ಕೆ ಮಿತಿಗೊಳಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಎನ್.ಆರ್.ರಮೇಶ್ ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸುವಂತೆ ದೂರಿನಲ್ಲಿ ಕಾಂಗ್ರೆಸ್ ಒತ್ತಾಯಿಸಿದೆ.
ಕೇಂದ್ರ ಸಚಿವ ಅನಂತಕುಮಾರ್ ಹಾಗೂ ಉದಯ್ ಗರುಡಾಚಾರ್ ವಿರುದ್ಧ ಪ್ರಕರಣ ದಾಖಲು ಮಾಡಬೇಕು. ಹಾಗೆಯೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರು ಬಾರಿ ಸುಳ್ಳು ಆರೋಪ ಪಟ್ಟಿಬಿಡಗಡೆ ಮಾಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ದಾಖಲೆ ವಶಪಡಿಸಿಕೊಂಡು ಕ್ರಮಕೈಗೊಳ್ಳಬೇಕು. ಆಧಾರ ರಹಿತ ಆರೋಪ ಮಾಡಿರುವ ಈ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಐಟಿ ಸೆಲ್ ಆಗ್ರಹಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.