ಮಮತಾಗೆ ಬೆಂಬಲ ನೀಡಲು ಕಾಂಗ್ರೆಸ್, ಸಿಪಿಎಂ ಹಿಂದೇಟು

Published : Jun 28, 2019, 09:14 AM ISTUpdated : Jun 28, 2019, 11:20 AM IST
ಮಮತಾಗೆ ಬೆಂಬಲ ನೀಡಲು ಕಾಂಗ್ರೆಸ್, ಸಿಪಿಎಂ ಹಿಂದೇಟು

ಸಾರಾಂಶ

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಲು ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಹಿಂದೇಟು ಹಾಕಿವೆ. ಇದರಿಂದ ಹೋರಾಟದ ಹಾದಿಗೆ ಹಿನ್ನಡೆ ಎದುರಾಗಿದೆ. 

ನವದೆಹಲಿ/ಹೈದ್ರಾಬಾದ್‌[ಜೂ.28] : ಬಿಜೆಪಿ ವಿರುದ್ಧ ಒಂದಾಗಿ ಹೋರಾಡುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಿಪಿಎಂ ಮತ್ತು ಕಾಂಗ್ರೆಸ್‌ ಪಕ್ಷಗಳು ತೃಣಮೂಲ ಕಾಂಗ್ರೆಸ್‌ ಜೊತೆ ಕೈಜೋಡಿಸಬೇಕೆಂಬ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಆಹ್ವಾನವನ್ನು ಎರಡೂ ಪಕ್ಷಗಳು ಅನುಮಾನದಿಂದ ನೋಡಿವೆ.

ಮಮತಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಪಿಎಂನ ಹಿರಿಯ ನಾಯಕ ಸುಧಾಕರ್‌ ರೆಡ್ಡಿ, ‘ಇದೊಂದು ಅರ್ಥಹೀನ ಮನವಿ. ಅವರು ನಮ್ಮನ್ನು ರಾಜಕೀಯ ಪ್ರತಿಸ್ಪರ್ಧಿ ಎಂಬುದರ ಬದಲಾಗಿ ಶತ್ರುಗಳು ಎಂದು ಪರಿಗಣಿಸಿದ್ದಾರೆ. ನಮ್ಮ ನೂರಾರು ಕಚೇರಿಗಳನ್ನೂ ಈಗಲೇ ಟಿಎಂಸಿ ಆಕ್ರಮಿಸಿಕೊಂಡಿದೆ. ನಮ್ಮ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಸಾವಿರಾರು ಜನರನ್ನು ಅವರ ಗ್ರಾಮಗಳಿಂದ ಹೊರಹಾಕಲಾಗಿದೆ. ಹೀಗಿದ್ದೂ ಅವರು ನಮ್ಮನ್ನು ಮೈತ್ರಿಗೆ ಹೇಗೆ ಆಹ್ವಾನಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಮಮತಾ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, ಮಮತಾ ತಮ್ಮ ಮನವಿ ಬಗ್ಗೆ ನಿಜವಾಗಿಯೂ ಗಂಭೀರವಾಗಿದ್ದಾರೆಯೇ? ಅವರು ನಿಜವಾಗಿಯೂ ಗಂಭೀರವಾಗಿದ್ದರೆ, ನಾವು ಈ ವಿಷಯದಲ್ಲಿ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸಬೇಕು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಣ್ಣಲ್ಲಿ ಮರೆಯಾಗಿದ್ದ ಜೈನರ ಕಾಲದ ಕಲ್ಯಾಣಿಗೆ ಮರುಜೀವ ನೀಡಿದ ಉದ್ಯೋಗ ಖಾತ್ರಿ ಯೋಜನೆ
ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!