
ಕೋಲಾರ,[ಆ.29]: ಜೆಡಿಎಸ್ ನಲ್ಲಿ ಅಧಿಕಾರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದವರು. ಕಾಂಗ್ರೆಸ್ ಪಕ್ಷವನ್ನು ಸಿದ್ದರಾಮಯ್ಯ ಕಟ್ಟಿಲ್ಲ. ಕಾಂಗ್ರೆಸ್ ಕಟ್ಟಿದ್ದು ನಾವು ಎಂದು ಸಿದ್ದರಾಮಯ್ಯ ವಿರುದ್ಧವೇ ವಾಗ್ದಾಳಿ ನಡೆಸಿದರು.
ಕೋಲಾದರಲ್ಲಿ ಇಂದು [ಗುರುವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಟಿ.ಬಿ, ಆಡಳಿತ ಅಧಿಕಾರ ವೈಪಲ್ಯಗಳಿಂದ ಬೇಸತ್ತು ಹೊರಗೆ ಬಂದಿದ್ದೇವೆ. ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿ ಏನು ಮಾಡಲಾಗುತ್ತಿಲ್ಲ. ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಬಂದು ನನ್ನ ಕ್ಷೇತ್ರದಲ್ಲಿ ತಟ್ಟಲಿ ತೊಡೆ. ಇಂತಹ ತೊಡೆ ತಟ್ಟುವರನ್ನ ನಾನು ನೋಡಿದ್ದೇನೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಹೇಳುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದರು.
ನಮ್ಮ ಮನೆಗೆ ಬಂದು ವಾಸ ಮಾಡಿ ಸಂಸಾರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಎಂಟಿಬಿ, ಮೈತ್ರಿ ಸರ್ಕಾರ ಬೀಳಲು ದೇವೇಗೌಡ ಮತ್ತು ಸಿದ್ದರಾಮಯ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ಕುಮಾರಸ್ವಾಮಿ, ರೇವಣ್ಣ ನನ್ನ ವಸತಿ ಖಾತೆಯಲ್ಲಿ ಮೂಗು ತೂರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಜಿನಾಮೆ ನೀಡುತ್ತೇನೆ ಎಂದು ಮೂರು ಬಾರಿ ಸಿದ್ದರಾಮಯ್ಯಗೆ ಹೇಳಿದ್ದೆ. ಕೊನೆಯದಾಗಿ ಎರಡು ಉದ್ದೇಶಗಳಿವೆ ಒಂದು ರಾಜಕೀಯ ನಿವೃತ್ತಿ,. ಇನ್ನೊಂದು ನನಗೆ ಯಾರ ಹಂಗೂ ಬೇಡ ಕಾರ್ಯಕರ್ತರ ಅಭಿಪ್ರಾಯದಿಂದ ಸ್ವತಂತ್ರವಾಗಿ ಸ್ಪರ್ದೆ ಮಾಡಲು ನಿರ್ಧರಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.