ಪಕ್ಷದ ವಕ್ತಾರರ ನೇಮಕಕ್ಕೆ ಲಿಖಿತ ಪರೀಕ್ಷೆ ನಡೆಸಿದ ಕಾಂಗ್ರೆಸ್!

Published : Jun 29, 2018, 02:56 PM IST
ಪಕ್ಷದ ವಕ್ತಾರರ ನೇಮಕಕ್ಕೆ ಲಿಖಿತ ಪರೀಕ್ಷೆ ನಡೆಸಿದ ಕಾಂಗ್ರೆಸ್!

ಸಾರಾಂಶ

ಪಕ್ಷದ ವಕ್ತಾರರ ನೇಮಕಕ್ಕೆ ಲಿಖಿತ್ ಪರೀಕ್ಷೆ ವಿನೂತನ ಪ್ರಯತ್ನಕ್ಕೆ ಮುಂದಾದ ಕಾಂಗ್ರೆಸ್  ಲಿಖಿತ ಪರೀಕ್ಷೆಗಳ ಮೂಲಕ ವಕ್ತಾರರ ನೇಮಕ ಸಂದರ್ಶನದಲ್ಲಿ ಪ್ರಶ್ನಾವಳಿಗಳ ಸರಮಾಲೆ     

ಲಕ್ನೋ(ಜೂ.29): ಒಂದೊಂದಾಗಿ ರಾಜ್ಯಗಳನ್ನು ಕಳೆದುಕೊಳ್ಳುತ್ತಾ ಅಧಿಕಾರಕ್ಕಾಗಿ ಪರಿತಪಿಸುತ್ತಿರುವ ಕಾಂಗ್ರೆಸ್ ಪಕ್ಷ, ತನ್ನ ಸಮರ್ಥನೆಗೆ ವಕ್ತಾರರನ್ನು ನೇಮಿಸುವಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಲಿಖಿತ ಪರೀಕ್ಷೆ ಮೂಲಕ ಪಕ್ಷದ ವಕ್ತಾರರನ್ನು ನೇಮಕ ಮಾಡಲು ಮುಂದಾಗಿದೆ. 

ಉತ್ತರ ಪ್ರದೇಶದ ಕಾಂಗ್ರೆಸ್ ಘಟಕಕ್ಕೆ ವಕ್ತಾರರನ್ನು ನೇಮಕ ಮಾಡುವುದಕ್ಕೂ ಮುನ್ನ ಪ್ರಸಕ್ತ ವಿದ್ಯಮಾನಗಳ ಕುರಿತ ಜ್ಞಾನವನ್ನು ಪರೀಕ್ಷಿಸಲು ಕಾಂಗ್ರೆಸ್ ಮುಂದಾಗಿದ್ದು, ಲಿಖಿತ ಪರೀಕ್ಷೆಯನ್ನು ನಡೆಸಿದೆ.  ಯುವಕರು, ಪಳಗಿದ ರಾಜಕಾರಣಿಗಳೂ ಸೇರಿದಂತೆ 70 ಕಾಂಗ್ರೆಸ್ ಪಕ್ಷದ ನಾಯಕರು ವಕ್ತಾರರಾಗಲು ಪರೀಕ್ಷೆ ಎದುರಿಸಿದ್ದಾರೆ. 

ಲಿಖಿತ ಪರೀಕ್ಷೆಯ ನಂತರ ಪರೀಕ್ಷೆ ಎದುರಿಸಿದವರಿಗೆ ಸಂದರ್ಶನವನ್ನೂ ನಡೆಸಲಾಗಿದ್ದು, ವಕ್ತಾರ ಹುದ್ದೆ ಬಯಸಲಿ ಬಂದವರಿಗೆ ಸುಮಾರು 14 ಪ್ರಶ್ನೆಗಳನ್ನು ಕೇಳಲಾಗಿದೆ. ರಾಜ್ಯದಲ್ಲಿರುವ ಜಿಲ್ಲೆ, ಬ್ಲಾಕ್ ಗಳು, ಲೋಕಸಭಾ ಸದಸ್ಯರ ಸಂಖ್ಯೆ, ವಿಧಾನಸಭಾ ಸದಸ್ಯರ ಬಲಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ವಿಫಲವಾಗಿರುವ ಪ್ರಮುಖ ಅಂಶಗಳನ್ನು ವಿವರಿಸಲು ಹಾಗೂ ಮನಮೋಹನ್ ಸಿಂಗ್ ಸರ್ಕಾರದ ಸಾಧನೆಯನ್ನು ವಿವರಿಸುವಂತೆ ಸಂದರ್ಶನದಲ್ಲಿ ಕೇಳಲಾಗಿತ್ತು.

2019 ರ ಲೋಕಸಭಾ ಚುನಾವಣೆ ಮಹತ್ವದ್ದಾಗಿರುವುದರಿಂದ ಕಾಂಗ್ರೆಸ್ ಪಕ್ಷ ಎಚ್ಚರಿಕೆಯಿಂದ ತನ್ನ ವಕ್ತಾರರನ್ನು ನೇಮಕ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಲಿಖಿತ ಪರೀಕ್ಷೆ ಮೂಲಕ ಪಕ್ಷದ ವಕ್ತಾರರನ್ನು ನೇಮಕ ಮಾಡಲು ಮುಂದಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ