ಸಿದ್ದರಾಮಯ್ಯ, ಡಿಕೆಶಿಗೆ ಹೊಸ ಟಾಸ್ಕ್ ಕೊಟ್ಟ ಕೈ ಹೈಕಮಾಂಡ್!

By Web DeskFirst Published Nov 19, 2018, 1:56 PM IST
Highlights

ಇತ್ತೀಚೆಗೆ ನಡೆದಿದ್ದ ರಾಜ್ಯದ 5 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಯಶಸ್ವಿಗಾಗಿ ಮುನ್ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಹೊಸ ಟಾಸ್ಕ್ ನೀಡಿದೆ. ಏನದು ಟಾಸ್ಕ್। ಇಲ್ಲಿದೆ ನೋಡಿ

ಬೆಂಗಳೂರು, [ನ.19]: ಇತ್ತೀಚೆಗೆ ನಡೆದಿದ್ದ ರಾಜ್ಯದ 5 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಯಶಸ್ವಿಗಾಗಿ ಮುನ್ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಹೊಸ ಟಾಸ್ಕ್ ನೀಡಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ದಾಖಲೆಯ ಜಯ ಸಾಧಿಸುವಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಪಾತ್ರ ದೊಡ್ಡದು. ಮತ್ತೊಂದೆಡೆ ಐದೂ ಕ್ಷೇತ್ರಗಳ ಉಪಚುನಾವಣೆಯನ್ನ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಗಲಿಗೆ ಹಾಕಲಾಗಿತ್ತು. 

ಇದರಲ್ಲಿ ಸಿದ್ದರಾಮಯ್ಯ ಅವರು ಪಕ್ಷದಲ್ಲಿನ ಎಲ್ಲಾ ಭಿನ್ನಾಭಿಪ್ರಾಯಗಳನ್ನ ಶಮನ ಮಾಡಿ ಜೆಡಿಎಸ್ ನೊಂದಿಗೆ ಯಶಸ್ವಿಯಾಗಿದ್ದರು.ಇದ್ರಿಂದ ಹೈಕಮಾಂಡ್ ಇದೀಗ ಇವರಿಬ್ಬರಿಗೆ ಪಕ್ಕದ ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯ ಉಸ್ತುವಾರಿ ನೀಡಿದೆ.

ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ತೆಲಂಗಾಣಕ್ಕೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಅತ್ಯುತ್ತಮ ಸಂಘಟನಾ ಚತುರರು ಎಂಬುದು ಈಗಾಗಲೇ ಹಲವು ಸಂದರ್ಭಗಳಲ್ಲಿ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ತೆಲಂಗಾಣ ಹೊಣೆಯನ್ನ ಈ ಇಬ್ಬರು ನಾಯಕರ ಹೆಗಲಿಗೆ ಹಾಕಿದೆ.

ಕಾಂಗ್ರೆಸ್- ಟಿಡಿಪಿ ಮೈತ್ರಿ ಹಾಗೂ ಬಿಜೆಪಿಗೆ ಕೆ ಚಂದ್ರಶೇಖರರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಎದುರಾಳಿಯಾಗಿದೆ.  119 ಸದಸ್ಯ ಬಲದ ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆಯು ಒಂದೇ ಹಂತದಲ್ಲಿ ಡಿಸೆಂಬರ್​ 7 ರಂದು ನಡೆಯಲಿದ್ದು, ಈ ತಿಂಗಳ 19 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. 

ಡಿಸೆಂಬರ್ 12ರಂದು ಫಲಿತಾಂಶ ಹೊರಬೀಳಲಿದೆ. ಕೆ ಚಂದ್ರಶೇಖರರಾವ್ ಅವರು ವಿಧಾನಸಭೆ ವಿಸರ್ಜಿಸಿದ್ದರಿಂದ ತೆಲಂಗಾಣದಲ್ಲಿ ಅವಧಿಗೆ ಮುನ್ನ ಚುನಾವಣೆ ಎದುರಿಸಬೇಕಾಗಿ ಬಂದಿದೆ.

click me!