
ನವದೆಹಲಿ : ಪಕ್ಷದ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಅವರ ಟ್ವೀಟ್ ಅವಾಂತರಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಕರೆಸಿಕೊಂಡು ಪ್ರಕರಣದ ಬಗ್ಗೆ ವಿವರಣೆ ಪಡೆದಿದ್ದಾರೆ.
ಮೊಯ್ಲಿ ಬಗ್ಗೆ ಕ್ರಮ ಕೈಗೊಳ್ಳಬೇಕೇ, ಬೇಡವೇ ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಪರಿಶೀಲನೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ರಾಜ್ಯ ಕಾಂಗ್ರೆಸ್ ನಾಯಕರು ಮೊಯ್ಲಿ ಅವರಿಂದ ವಿವರಣೆಯನ್ನು ಕೇಳಿಲ್ಲ ಎಂದು ಸಮಜಾಯಿಷಿ ನೀಡುವ ಪ್ರಯತ್ನ ನಡೆಸಿದ್ದರೂ ಮೊಯ್ಲಿ ಹೇಳಿಕೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ಕಸಿವಿಸಿ ಉಂಟು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.