ರಾಜ್ಯ ಕಾಂಗ್ರೆಸ್ ರಾಜಕಾರಣ ದೆಹಲಿಗೆ ಶಿಫ್ಟ್

By Ramesh BFirst Published Sep 17, 2018, 3:38 PM IST
Highlights

ರಾಜ್ಯ ಕಾಂಗ್ರೆಸ್​ನಲ್ಲಿ ಎದ್ದಿರುವ ಬಂಡಾಯದ ಬೆಂಕಿ ಆರಿಸಲು ಖುದ್ದು ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್ ಆಗಿದೆ. 

ಬೆಂಗಳೂರು, (ಸೆ.17): ರಾಜ್ಯ ಕಾಂಗ್ರೆಸ್​ನಲ್ಲಿ ಎದ್ದಿರುವ ಬಂಡಾಯದ ಬೆಂಕಿ ಆರಿಸಲು ಖುದ್ದು ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್ ಆಗಿದೆ. 

ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಶ್ವರ್​ ಖಂಡ್ರೆ ಮತ್ತು ಉಪ ಮುಖ್ಯಮಂತ್ರಿ ಪರಮೇಶ್ವರ್​ಗೆ ದೆಹಲಿಗೆ ಬರುವಂತೆ ಹೈಕಮಾಂಡ್​ ಸೂಚಿಸಿದೆ. ಅಷ್ಟೇ ಅಲ್ಲದೇ ಜಾರಕಿಹೊಳಿ ಸೋದರರು ಹಾಗೂ ಅತೃಪ್ತ ಶಾಸಕರಿಗೂ ಸಹ ಬುಲಾವ್ ನೀಡಿದೆ.

ರಾಜ್ಯ ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಮುಲಾಮು ಹಚ್ಚುವ ಕೆಲಸ ಆರಂಭಿಸಿದ್ದಾರೆ. ಆದರೂ ಸಹ ಹೈಕಮಾಂಡ್ ನಾಯಕರುಗಳನ್ನ ದೆಹಲಿಗೆ ಕರೆಸಿಕೊಳ್ಳುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಈಶ್ವರ್​ ಖಂಡ್ರೆ ಸೇರಿದಂತೆ ಜಾರಕಿಹೊಳಿ ಸೋದರರು & ಅತೃಪ್ತ ಶಾಸಕರ ತಂಡವೂ ಕೂಡ ನಾಳೆ (ಮಂಗಳವಾರ) ಸಂಜೆ ದೆಹಲಿಗೆ ತೆರಳಲಿದ್ದು, ಬುಧವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಹತ್ವದ ಸಭೆ ನಡೆಯಲಿದೆ.

click me!