ಸಂಪುಟ ವಿಸ್ತರಣೆಗೂ ಮುನ್ನ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್‌ಗೆ ಕರೆ ಬಂದ ಕಾರಣ

Published : Dec 20, 2018, 08:51 PM IST
ಸಂಪುಟ ವಿಸ್ತರಣೆಗೂ ಮುನ್ನ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್‌ಗೆ ಕರೆ ಬಂದ ಕಾರಣ

ಸಾರಾಂಶ

ಒಂದು ಕಡೆ ಸಚಿವ ಸಂಪುಟ ವಿಸ್ತರಣೆ ವಿಚಾರ ಬಹು ಚರ್ಚಿತವಾಗಿದ್ದರೆ ಇನ್ನೊಂದು ಕಡೆ ನಾಯಕರ ನಡುವಿನ ಶೀತಲ ಸಮರ ಮತ್ತೆ ತಾರಕಕ್ಕೆ ಏರಿದಂತೆ ಕಾಣುತ್ತಿದೆ.

ಬೆಳಗಾವಿ[ಡಿ.20] ಲಕ್ಷ್ಮಿ ಹೆಬ್ಬಾಳ್ಕರ್- ರಮೇಶ್ ಜಾರಕಿಹೊಳಿ ನಡುವೆ ಶೀತಲ ಸಮರ ದೆಹಲಿ ಅಂಗಳ ತಲುಪಿದೆ. ಇಬ್ಬರ ನಾಯಕರಿಂದ ಪಕ್ಷಕ್ಕೆ- ಮೈತ್ರಿ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತಿದೆ ಎನ್ನುವ ವಿಚಾರವನ್ನು ಸಹ ಅಷ್ಟೆ ಗಂಭೀರವಾಗಿ ತೆಗೆದುಕೊಳ್ಳಲಾಗುತ್ತಿದೆ.

ರಮೇಶ್ ಜಾರಕಿಹೊಳಿಗೆ ಹೈಕಮಾಂಡ್  ಈಗಾಗಲೇ ಬುಲಾವ್ ನೀಡಿದೆ. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ದೆಹಲಿಗೆ ಬರುವಂತೆ ತಿಳಿಸಲಾಗಿದೆ.  ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಜೊತೆ ಮಾತುಕತೆ ನಡೆಸಲು ದೆಹಲಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿಗೆ ತೆರಳುತ್ತಿದ್ದಾರೆ.

ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ಇಬ್ಬರು ನಾಯಕರ ನಡುವಿನ ಮನಸ್ಥಾಪ ಮಾತ್ರ ಮರೆಯಾಗಿಲ್ಲ. ಈ ಹಿಂದೆ ಪಿಎಲ್ ಡಿ ಬ್ಯಾಂಕ್ ಚುನಾವಣೆ ವೇಳೆ ಇಬ್ಬರ ನಡುವಿನ ಶೀತಲ ಸಮರ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮಾಡಿತ್ತು.


 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ದಿಢೀರ್ ಸ್ಫೋಟ, ಕಂಗಾಲಾದ ಜನ
ಮಂಗಳೂರು: ಉರ್ವ ಸ್ಟೋರ್ ಬಳಿ 29 ವರ್ಷಗಳ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಸದಸ್ಯನ ಬಂಧನ