ಆಹ್ವಾನ ನೀಡಿದ್ದ ಉಸ್ತುವಾರಿಗೆ ಸುಸ್ತಾಗಿಸುವಂತೆ ಕಾಂಗ್ರೆಸ್ ಸರಣಿ ಟ್ವೀಟ್

Published : Jun 05, 2019, 11:22 PM ISTUpdated : Jun 05, 2019, 11:25 PM IST
ಆಹ್ವಾನ ನೀಡಿದ್ದ ಉಸ್ತುವಾರಿಗೆ ಸುಸ್ತಾಗಿಸುವಂತೆ ಕಾಂಗ್ರೆಸ್ ಸರಣಿ ಟ್ವೀಟ್

ಸಾರಾಂಶ

ಬಿಜೆಪಿಗೆ ಬರುವಂತೆ ಕೈ ಕಾಂಗ್ರೆಸ್ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿರುವ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಅವರಿಗೆ ಕರ್ನಾಟಕ ಕಾಂಗ್ರೆಸ್ ಕುಟುಕಿದೆ.

ಬೆಂಗಳೂರು, [ಜೂನ್.05]: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಲು ಸ್ವತಃ ಕರ್ನಾಟಕ ಬಿಜೆಪಿ ಉಸ್ತುವಾರಿಗಳೇ ಅಖಾಡಕ್ಕಿಳಿದ್ರಾ ಎನ್ನುವ ಪ್ರಶ್ನೆ ಉದ್ಭವಿಸಿತ್ತು.  ಪ್ರಶ್ನೆ ಏಳಲು ಅದಕ್ಕೆ ಮುರಳಿಧರರಾವ್ ನೀಡಿದ ಹೇಳಿಕೆ ಮುಖ್ಯ ಕಾರಣವಾಗಿತ್ತು.

ಉಮೇಶ್ ಜಾಧವ್ ಉದಾಹರಣೆ ಕೊಟ್ಟು ಹೇಳಿಕೆ ನೀಡಿದ್ದ ಮುರಳಿಧರ ರಾವ್ ಪರೋಕ್ಷವಾಗಿ ಮೈತ್ರಿ ಸರ್ಕಾರವನ್ನು ಉರುಳಿಸಬೇಕು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು ಎಂಬ ಸುದ್ದಿ ಮಾಧ್ಯಮದಲ್ಲಿ ಹರಿದಾಡುತ್ತಿದ್ದಂತೆ ಕಾಂಗ್ರೆಸ್ ಕೌಂಟರ್ ನೀಡಿದೆ.

ಗರಿಗೆದರಿದ ರಾಜಕೀಯ: ಬಿಜೆಪಿಗೆ ಬರುವಂತೆ ಕಾಂಗ್ರೆಸ್ ಶಾಸಕರಿಗೆ ಬಹಿರಂಗ ಆಹ್ವಾನ..!

ಬಹಿರಂಗವಾಗಿಯೇ ನೀವು ಮೈತ್ರಿ ಸರ್ಕಾರದ ಶಾಸಕರನ್ನು ಬಿಜೆಪಿಗೆ ಆಹ್ವಾನಿಸುತ್ತಿದ್ದೀರಿ. ನಿಮ್ಮ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಆಪರೇಷನ್ ಕಮಲ ಕುದುರೆ ವ್ಯಾಪಾರವು ವಿಫಲ ಯತ್ನ ಎಂದು ಸಾಬೀತಾಗಿದೆ. ಹೀಗಿದ್ದರೂ ಆಪರೇಷನ್ ಕಮಲದ ದಲ್ಲಾಳಿಯಂತೆ ತಾವು ವರ್ತಿಸುತ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!