
ಬೆಂಗಳೂರು (ಜೂ.26): ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ ರಾಜ್ಯದ ನಾಯಕರಿಗೆ ನಿದ್ದೆ ಮಾಡಲು ಬಿಡುತ್ತಿಲ್ಲ. ಅಷ್ಟರಮಟ್ಟಿಗೆ ಪಕ್ಷ ಸಂಘಟನೆಯಲ್ಲಿ ನಿರತರಾಗುವಂತೆ ಸೂಚನೆ ನೀಡುತ್ತಲೇ ಇದ್ದಾರೆ. ಜೊತೆಗೆ ಪಕ್ಷದ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಲೇ ಇದ್ದಾರೆ. ನಾಳೆಯಿಂದ ವೇಣುಗೋಪಾಲ ಆರು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದು, ಐದು ಜಿಲ್ಲೆಗಳಲ್ಲಿ ಸ್ಥಳೀಯ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಸೂಚನೆ ನೀಡಲಿದ್ದಾರೆ.
ಜೊತೆಗೆ ನಾಳೆ ಬೆಂಗಳೂರಲ್ಲಿ ವೇಣುಗೋಪಾಲ ಪದಾಧಿಕಾರಿಗಳ, ರಾಜ್ಯ ಮುಖಂಡರ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ ಗುಂಡೂರಾವ್, ಎಸ್ ಆರ್ ಪಾಟೀಲ್ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಹಿರಿಯ ಸಂಸದರು, ಶಾಸಕರು, ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾಲ ಮನ್ನಾ ಮಾಡಿದ ಸರ್ಕಾರದ ಸಾಧನೆಯನ್ನು ಜನರಿಗೆ ಮುಟ್ಟಿಸುವುದು. ಬಿಜೆಪಿ ಹೆಣೆಯುತ್ತಿರುವ ತಂತ್ರಗಳಿಗೆ ಪ್ರತಿ ತಂತ್ರಗಳನ್ನು ಹೇಗೆ ಹೆಣೆಯಬೇಕು, ರಾಜ್ಯದ ಮೂಲೆ ಮೂಲೆಯಲ್ಲಿರುವ ಕಾರ್ಯಕರ್ತರನ್ನ ಪಕ್ಷ ಸಂಘಟನೆಯಲ್ಲಿ ಹೇಗೆ ತೊಡಗಿಸಬೇಕು. ಉಳಿದ ಅವಧಿಯಲ್ಲಿ ಸರ್ಕಾರ ಹೇಗೆ ಕಾರ್ಯೋನ್ಮುಖರಾಗ ಬೇಕು ಅನ್ನೋದು ಸೇರಿ ಇತರೆ ವಿಚಾಋಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಅಲ್ಲದೇ ರಾಜ್ಯ ಮುಖಂಡರಿಗೆ ಕೆಲ ಸೂಚನೆಗಳನ್ನು ವೇಣುಗೋಪಾಲ ನೀಡಲಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.