
ಮಡಿಕೇರಿ: ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಈಗ ತಮ್ಮ ನಿಲುವು ಬದಲಿಸಿದ್ದಾರೆ. ಕಾಂಗ್ರೆಸ್ ಬಗ್ಗೆ ಮೃದುಧೋರಣೆ ತಳೆದಿದ್ದಾರೆ. ‘ಕಾಂಗ್ರೆಸ್ ನನ್ನ ತಾಯಿಯಿದ್ದಂತೆ, ಆ ಪಕ್ಷದ ಕೆಲವರಿಂದ ಕಿರುಕುಳ ಆಯಿತೇ ಹೊರತು ಪಕ್ಷದಿಂದ ಯಾವುದೇ ಅನ್ಯಾಯ ಆಗಿಲ್ಲ’ ಎಂದು ಹೇಳಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸಂವಾದ ಕಾರ್ಯ ಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ನನಗೆ ತಾಯಿ ಇದ್ದಂತೆ. ಕಾಂಗ್ರೆಸ್‌ನಿಂದ ನನಗೆ ಯಾವುದೇ ತೊಂದರೆಯಾಗಿಲ್ಲ.
ಕೆಲವು ನಾಯಕರ ಕಿರುಕುಳದಿಂದ ಪಕ್ಷ ಬಿಡುವ ಅನಿವಾರ್ಯತೆ ಸೃಷ್ಟಿಯಾಯಿತು ಅಷ್ಟೆ. ಕುಮಾರಸ್ವಾಮಿ, ದೇವೇಗೌಡ ಇನ್ನಿತರರು ರಾಜಕಾರಣದಿಂದ ಹಿಂದಡಿ ಇಡದಂತೆ ಹೇಳಿ ನನ್ನ ಮೇಲಿನ ವಿಶ್ವಾಸ ಹಾಗೂ ನಂಬಿಕೆಯಿಂದ ಜೆಡಿಎಸ್‌ನಲ್ಲಿ ಸ್ಥಾನ ನೀಡಿದ್ದಾರೆ ಎಂದು ಹೇಳಿದರು.ಬಿಜೆಪಿಗೆ ಸರ್ಕಾರ ಬೀಳಿಸುವ ವ್ಯಸನ ಅಂಟಿಕೊಂಡಿದೆ ಎಂದು ಚಾಟಿ ಬೀಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.