ಕಾಂಗ್ರೆಸ್‌ನಿಂದ ಗುಪ್ತವಾಗಿ ಯುವ ಪ್ರತಿಭಾನ್ವೇಷಣೆ

By Suvarna Web DeskFirst Published Apr 13, 2018, 7:29 AM IST
Highlights

ಪಕ್ಷದಲ್ಲಿ ನಾಯಕತ್ವದ ಕೊರತೆಯನ್ನು ನೀಗಿಸುವ ನಿಟ್ಟಿನಿಂದ ಕಾಂಗ್ರೆಸ್‌ ಪ್ರತಿಭಾವಂತರ ಶೋಧಕ್ಕೆ ರಹಸ್ಯವಾಗಿ ಚಾಲನೆ ನೀಡಿದೆ. ಸ್ಥಳೀಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಾವಂತ ಯುವ ಮುಖಂಡರನ್ನು ಗುರುತಿಸಿ ಪಕ್ಷಕ್ಕೆ ಸೇರ್ಪಡೆಗೊಳಿಸುವುದು ಕಾಂಗ್ರೆಸ್‌ ಪಕ್ಷದ ಉದ್ದೇಶ ಎಂದು ಹೇಳಲಾಗುತ್ತಿದೆ.

ನವದೆಹಲಿ: ಪಕ್ಷದಲ್ಲಿ ನಾಯಕತ್ವದ ಕೊರತೆಯನ್ನು ನೀಗಿಸುವ ನಿಟ್ಟಿನಿಂದ ಕಾಂಗ್ರೆಸ್‌ ಪ್ರತಿಭಾವಂತರ ಶೋಧಕ್ಕೆ ರಹಸ್ಯವಾಗಿ ಚಾಲನೆ ನೀಡಿದೆ. ಸ್ಥಳೀಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಾವಂತ ಯುವ ಮುಖಂಡರನ್ನು ಗುರುತಿಸಿ ಪಕ್ಷಕ್ಕೆ ಸೇರ್ಪಡೆಗೊಳಿಸುವುದು ಕಾಂಗ್ರೆಸ್‌ ಪಕ್ಷದ ಉದ್ದೇಶ ಎಂದು ಹೇಳಲಾಗುತ್ತಿದೆ.

ಪ್ರತಿಭಾವಂತರನ್ನು ಗುರುತಿಸಲು ಈಗಾಗಲೇ ತಂಡಗಳನ್ನು ರಚಿಸಲಾಗಿದ್ದು, ವಿವಿಧ ರಾಜ್ಯಗಳಲ್ಲಿ ಪ್ರವಾಸವನ್ನು ಕೈಗೊಂಡಿದೆ. ಆದರೆ, ತಂಡದ ಸದಸ್ಯರು ಮತ್ತು ಶೋಧ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್‌ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿಲ್ಲ. ಪ್ರಬಲವಾದ ಮುಖಂಡರ ಕೊರತೆ ಇರುವ ರಾಜ್ಯಗಳಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸಲು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ‘ಪ್ರತಿಭಾ ಶೋಧ’ಕ್ಕೆ ಚಾಲನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಮತ್ತು ರಾಜ್ಯ ಮಟ್ಟದ ಮುಖಂಡರಿಂದ ಮಾಹಿತಿ ಪಡೆದು ಪ್ರತಿಭಾ ಶೋಧವನ್ನು ನಡೆಸಲಾಗುತ್ತಿದೆ. ರಾಜಕೀಯ ಪಕ್ಷಗಳಿಂದ ಹೊರತಾದ ಯುವ ಜನರಿಗೆ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಪ್ರದರ್ಶಿಸಲು ಇದೊಂದು ಅವಕಾಶವನ್ನು ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.

click me!