ಲೈಂಗಿಕ ಕಿರುಕುಳ: ರಮ್ಯಾ ಆಪ್ತ, ಕಾಂಗ್ರೆಸ್ ಐಟಿ ಸೆಲ್ ಸದಸ್ಯನ ಬಂಧನ

First Published Jul 31, 2018, 11:49 AM IST
Highlights
  • ಕಳೆದ ಜು. 3ರಂದು ಮಹಿಳೆ ನೀಡಿದ್ದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರಿಂದ ಪ್ರಕರಣ ದಾಖಲು
  • ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನ ಮುಖ್ಯಸ್ಥೆ ದಿವ್ಯ ಸ್ಪಂದನಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ 

ನವದೆಹಲಿ: ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಐಟಿ ಸೆಲ್ ನ ಸದಸ್ಯನನ್ನು ಕೊನೆಗೂ ದೆಹಲಿ ಪೊಲೀಸರು ಬಂಧಿಸಿದ್ದಾರೆ. 

ಕಾಂಗ್ರೆಸ್ ಪಕ್ಷದ ಐಟಿ ಸೆಲ್ ನ ಚಿರಾಗ್ ಪಟ್ನಾಯಕ್ [39] ಎಂಬಾತನನ್ನು ಸೋಮವಾರ ರಾತ್ರಿ  ನಾರ್ತ್ ಅವೆನ್ಯೂ ಪ್ರದೇಶದಿಂದ ಬಂಧಿಸಲಾಗಿದೆ. ಬಂಧನ 1 ಗಂಟೆಯೊಳಗೆ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ಕೆಲಸ ಮಾಡಿದ್ದ ಮಹಿಳೆಯೋರ್ವರು ಪಟ್ನಾಯಕ್ ವಿರುದ್ಧ ದೂರು ನೀಡಿದ್ದು, ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ಕೆಲಸ ಮಾಡುವ ವೇಳೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಗಂಭೀರ ಆರೋಪ ಮಾಡಿದ್ದರು.

ಕಳೆದ ಜು. 3ರಂದು ಮಹಿಳೆ ನೀಡಿದ್ದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.  ಕೆಲಸದ ವೇಳೆ ಹಿಂದಿನಿಂದ ಬಂದು ತಮ್ಮನ್ನು ಮುಟ್ಟುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದನ್ನೇ ಆ ನಾಯಕ ತನ್ನ ಕಾಯಕ ಮಾಡಿಕೊಂಡಿದ್ದ ಎಂದು ಸಂತ್ರಸ್ತ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಪತ್ರ ಬರೆದಿರುವ ಮಹಿಳೆ, ಪಕ್ಷದ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ನಡೆಯುತ್ತಿರುವ ಇಂತಹ ಅನೇಕ ಸಂಗತಿಗಳ ಮೇಲೆ ಬೆಳಕು ಚೆಲ್ಲಿದ್ದರು.

ಅಲ್ಲದೇ ಈ ಕುರಿತು ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನ ಮುಖ್ಯಸ್ಥೆ ದಿವ್ಯ ಸ್ಪಂದನ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದರು.

ಇಂಗ್ಲಿಷ್‌ನಲ್ಲಿ ಈ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

click me!