
ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿಗೆ ನಿರ್ಧರಿಸಿವೆ. ಇದರಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಪಕ್ಷದ ಸಂಸದರು ನಿರ್ಧಾರ ಮಾಡಿದ್ದಾರೆ. ಜೆಡಿಎಸ್ ಪಕ್ಷವು ಶಿವಮೊಗ್ಗ ಸೇರಿದಂತೆ ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದೆ.
ಹೀಗಾಗಿ, ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಬಳಿಕ ಯಾವ ಪಕ್ಷಕ್ಕೆ ಕ್ಷೇತ್ರ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಅವರಿಗೆ ಬಿಟ್ಟುಕೊಡು ವುದಕ್ಕೂ ಮೊದಲು ಹಲವು ಹಂತಗಳಲ್ಲಿ ಚರ್ಚೆಗಳು ನಡೆಯಬೇಕು ಎಂದು ಸಂಸದರು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕ್ಷೇತ್ರಗಳ ಹಂಚಿಕೆ ಏಕಾಏಕಿ ನಡೆ ಯುವುದಿಲ್ಲ. ಕ್ಷೇತ್ರಗಳ ಹಂಚಿಕೆಗೆ ಮೊದಲು ಎಲ್ಲಾ ಹಂತದಲ್ಲೂ ಸಭೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.