ಬಿಜೆಪಿ ಶಸ್ತ್ರತ್ಯಾಗ: ಮೂವರು ಮೇಲ್ಮನೆಗೆ ಅವಿರೋಧ ಆಯ್ಕೆ

Published : Sep 25, 2018, 07:35 AM IST
ಬಿಜೆಪಿ ಶಸ್ತ್ರತ್ಯಾಗ: ಮೂವರು ಮೇಲ್ಮನೆಗೆ ಅವಿರೋಧ ಆಯ್ಕೆ

ಸಾರಾಂಶ

ಕೈಗೂಡದ ಅಂಕಿ ಆಟ: ಅಭ್ಯರ್ಥಿಯನ್ನು ಕಣಕ್ಕಿಳಿಸದ ಬಿಜೆಪಿ | ವೇಣು, ನಜೀರ್, ರಮೇಶ್‌ಗೌಡ ಪರಿಷತ್‌ಗೆ ಆಯ್ಕೆ ಖಚಿತ

ಬೆಂಗಳೂರು (ಸೆ. 25): ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ನಾಮಪತ್ರ ಸಲ್ಲಿಸಿ ಕಣಕ್ಕಿಳಿಸಲು ಎಲ್ಲಾ ರೀತಿಯಲ್ಲಿಯೂ ಸಿದ್ಧತೆ ನಡೆಸಿದರೂ ಅಂತಿಮ ಕ್ಷಣದಲ್ಲಿ ಸ್ಪರ್ಧಾಕಣದಿಂದ ಬಿಜೆಪಿ ದೂರ ಉಳಿದ ಹಿನ್ನೆಲೆಯಲ್ಲಿ ವಿಧಾನ
ಪರಿಷತ್‌ಗೆ ಅ.೪ಕ್ಕೆ ನಡೆಯಬೇಕಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಮನಗಂಡ ಬಿಜೆಪಿ ಕೊನೆ ಕ್ಷಣದಲ್ಲಿ ತನ್ನ ಅಭ್ಯರ್ಥಿಗಳನ್ನು ಹಾಕದೆ ಕಣದಿಂದ ಹಿಂದೆ ಸರಿದಿದೆ. ಹೀಗಾಗಿ ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳ  ಮತ್ತು ಜೆಡಿಎಸ್‌ನ ಒಬ್ಬ ಅಭ್ಯರ್ಥಿ ಅವಿರೋಧ ಆಯ್ಕೆಯಾಗುವುದು ನಿಚ್ಚಳವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು