
ದೊಡ್ಡಬಳ್ಳಾಪುರ : ಕಾಂಗ್ರೆಸ್ಸಿನ ಹಾಲಿ ಶಾಸಕ ಟಿ. ವೆಂಕಟರಮಣಯ್ಯ ಮತ್ತೆ ಸ್ಪರ್ಧಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರರೂ ಆಗಿರುವ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಮತ್ತೆ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.
ಜತೆಗೆ ಪರ್ಯಾಯ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟವನ್ನೂ ನಡೆಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ತೀರಾ ಪ್ರಬಲವಾಗಿಯೇನೂ ಇಲ್ಲ. ಆಪರೇಷನ್ ಕಮಲದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನಿಂದ ಬಿಜೆಪಿಗೆ ವಲಸೆ ಬಂದಿದ್ದ ನರಸಿಂಹಸ್ವಾಮಿ ಅವರಿಂದಾಗಿ ಪಕ್ಷದ ಸಂಘಟನೆ ಬೆಳೆದಿತ್ತು.
ಆದರೆ, ಈಗ ನರಸಿಂಹಸ್ವಾಮಿ ಪಕ್ಷದಲ್ಲಿ ಕ್ರಿಯಾಶೀಲವಾಗಿಲ್ಲ. ಕಳೆದ ಬಾರಿ ಜೆಡಿಎಸ್‌ಗೆ ಸಡ್ಡು ಹೊಡೆದು ಪಕ್ಷೇತರರಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದಿದ್ದ ಮುನೇಗೌಡ ಅವರಿಗೆ ಈ ಬಾರಿ ಜೆಡಿಎಸ್‌ನಿಂದಲೇ ಟಿಕೆಟ್ ಘೋಷಿಸಲಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆ ಕೂಡ ಬಲವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.