ಇನ್ನೊಂದು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಪತನ: ಸದಾನಂದ ಗೌಡ

By Naveen KodaseFirst Published Aug 28, 2018, 12:33 PM IST
Highlights

ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿದೆಯೇ ಹೊರತು ಈ ಸರ್ಕಾರಕ್ಕೆ ಬೇರೆ ಉದ್ದೇಶವಿಲ್ಲ. ಜೆಡಿಎಸ್, ಕಾಂಗ್ರೆಸ್ಸಿಗರು ಅಧಿಕಾರಕ್ಕಾಗಿ ಹಾತೊರೆಯುತ್ತಾರೆ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕಾದರೂ ಅವರಿಗೆ ಜೆಡಿಎಸ್ ಬೆಂಬಲ ಬೇಕು. ಆದರೆ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ದೇವೇಗೌಡರು ಒಂದಾಗಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ಮಂಗಳೂರು[ಆ.28]: ಇನ್ನೊಂದು ತಿಂಗಳಲ್ಲಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿದೆಯೇ ಹೊರತು ಈ ಸರ್ಕಾರಕ್ಕೆ ಬೇರೆ ಉದ್ದೇಶವಿಲ್ಲ. ಜೆಡಿಎಸ್, ಕಾಂಗ್ರೆಸ್ಸಿಗರು ಅಧಿಕಾರಕ್ಕಾಗಿ ಹಾತೊರೆಯುತ್ತಾರೆ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕಾದರೂ ಅವರಿಗೆ ಜೆಡಿಎಸ್ ಬೆಂಬಲ ಬೇಕು. ಆದರೆ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ದೇವೇಗೌಡರು ಒಂದಾಗಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ಹೈಕಮಾಂಡ್ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಅವಕಾಶಕೊಟ್ಟಿದ್ದಾರೆ. ಆದರೆ ಒಪ್ಪಿಗೆ ಕೊಡುವ ಮುನ್ನ ಸರ್ಕಾರ ಉರುಳಿಸೋದನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರಿಂದಲೇ ಸರ್ಕಾರ ಉರುಳುತ್ತದೆ. ಇದಕ್ಕಾಗಿ ಬಿಜೆಪಿ ಏನೂ ಮಾಡಬೇಕಾಗಿಲ್ಲ ಎಂದು ಹೇಳಿದ್ದಾರೆ. 

click me!