ಉಪ ಚುನಾವಣೆಯಲ್ಲಿ 2 ಪಕ್ಷಗಳ ಮೈತ್ರಿ ಪಕ್ಕಾ

Published : Oct 10, 2018, 07:17 AM IST
ಉಪ ಚುನಾವಣೆಯಲ್ಲಿ 2 ಪಕ್ಷಗಳ ಮೈತ್ರಿ ಪಕ್ಕಾ

ಸಾರಾಂಶ

ನಿರೀಕ್ಷೆ ಯಂತೆಯೇ ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮತ್ತು ಜಂಟಿ ಪ್ರಚಾರಾಂದೋಲನ ನಡೆಸಿ ಬಿಜೆಪಿಗೆ ಎಲ್ಲಾ ಐದು ಕ್ಷೇತ್ರಗಳಲ್ಲೂ ಸೋಲು ಣಿಸಲು ತೀರ್ಮಾನಿಸಲಾಗಿದೆ. 

ಬೆಂಗಳೂರು : ಸ್ಥಳೀಯ ನಾಯಕರ ತೀವ್ರ ವಿರೋಧದ ನಡುವೆಯೇ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಜಂಟಿಯಾಗಿ ಎದುರಿಸಲು ಕಾಂಗ್ರೆಸ್-ಜೆಡಿಎಸ್ ನಿರ್ಧರಿಸಿದೆ. 

ಮಂಗಳವಾರ ತಡರಾತ್ರಿ ನಡೆದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ನಾಯಕರ ಸಭೆ ಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ನಿರೀಕ್ಷೆ ಯಂತೆಯೇ ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮತ್ತು ಜಂಟಿ ಪ್ರಚಾರಾಂದೋಲನ ನಡೆಸಿ ಬಿಜೆಪಿಗೆ ಎಲ್ಲಾ ಐದು ಕ್ಷೇತ್ರಗಳಲ್ಲೂ ಸೋಲು ಣಿಸಲು ತೀರ್ಮಾನಿಸಲಾಗಿದೆ. 

ಈ ಐದು ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಮಂಗಳವಾರ ದಿನವಿಡೀ ನಡೆದ ಸರಣಿ ಸಭೆಗಳಲ್ಲಿ ಕಾಂಗ್ರೆಸ್‌ನ ಸ್ಥಳೀಯ ನಾಯಕರ ಅಭಿಪ್ರಾಯ ವನ್ನು ಸಂಗ್ರಹಿಸಲಾಯಿತು.  ಬಳಿಕ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಡರಾತ್ರಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಸಮ ನ್ವಯ ಸಮಿತಿ ಸಂಚಾಲಕ ಡ್ಯಾನಿಶ್ ಅಲಿ ಅವರೊಂದಿಗೆ ಸಭೆ ನಡೆಸಿ ಈ ತೀರ್ಮಾನ ಕೈಗೊಂಡರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಉಪ ಚುನಾವಣೆಯಲ್ಲೂ ಮೈತ್ರಿ ಮುಂದುವರೆದಿರುವುದನ್ನು ಘೋಷಿಸಿದರು. 

ಮೈತ್ರಿಗೆ ಸ್ಥಳೀಯ ನಾಯಕ ತೀವ್ರ ವಿರೋಧ: ಇದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಉಸ್ತು ವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ದಿನವಿಡೀ ನಡೆದ ಎರಡು ವಿಧಾನಸಭಾ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆಯಲ್ಲಿ ಮೈತ್ರಿಗೆ ತೀವ್ರ ವಿರೋಧ ವ್ಯಕ್ತವಾಯಿತು. ಇದಕ್ಕೆ ಪ್ರತಿ ಯಾಗಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ನಾಯಕರು ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿರುವ 
ಹಿನ್ನೆಲೆಯಲ್ಲಿ ಮತ್ತು ಹೈಕಮಾಂಡ್ ಸೂಚನೆಯೂ ಇರುವ ಕಾರಣ ಮೈತ್ರಿ ಅನಿವಾರ್ಯ ಎಂದು ಸ್ಥಳೀಯ ನಾಯಕರಿಗೆ ಮನವರಿಕೆ ಮಾಡಿಕೊಡಲು ಹೆಣಗಬೇಕಾಯಿತು. 

ಅಂತಿಮವಾಗಿ ಮೈತ್ರಿ ಹೇಗೆ ಕ್ಷೇತ್ರದಲ್ಲಿ ಪಕ್ಷದ ಶಕ್ತಿಯನ್ನು ಕುಂದಿಸುತ್ತಿದೆ ಎಂಬುದನ್ನು ನಿಮ್ಮ ಗಮನಕ್ಕೆ ತಂದಿದ್ದೇವೆ. ಮೈತ್ರಿ ಮಾಡಿ ಕೊಳ್ಳುವುದೇ ಆದರೆ, ಸ್ಥಳೀಯವಾಗಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ರಕ್ಷಣೆ ಮಾಡಲು ಅನುವಾಗುವಂತಹ ಷರತ್ತುಗಳನ್ನು ಜೆಡಿಎಸ್ ಮುಂದಿ ಡಬೇಕು. ಇದನ್ನು ಮಾಡದೇ ಜೆಡಿಎಸ್ ಹೇಳಿದ್ದಕ್ಕೆಲ್ಲ ಮಣೆ ಹಾಕಿದರೆ ಮುಂದಾಗುವ ಅನಾಹುತಗಳಿಗೆ ತಾವು ಹೊಣೆಯಲ್ಲ ಎಂಬ ನೇರ ಎಚ್ಚರಿಕೆಯನ್ನು ಸ್ಥಳೀಯ ನಾಯಕರು ನೀಡಿದರು ಎನ್ನಲಾಗಿದೆ. 

ರಾಮನಗರದಲ್ಲಿ ಭಾರಿ ವಿರೋಧ: ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ದಿನವಿಡೀ ನಡೆದ ಸರಣಿ ಸಭೆಗಳ ಆರಂಭ ರಾಮನಗರ ವಿಧಾನ ಸಭಾ ಕ್ಷೇತ್ರದ ನಾಯಕರಿಂದ ಆಯಿತು. ಈ ಸಭೆಯಲ್ಲಿ ಕ್ಷೇತ್ರದಿಂದ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಸ್ಥಳೀಯ ನಾಯಕರಾದ ಸಿ.ಎಂ. ಲಿಂಗಪ್ಪ, ಕಳೆದ ಬಾರಿಯ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ಸಭೆಯಲ್ಲಿ
ಈ ನಾಯಕರು ಪ್ರಬಲವಾಗಿ ಮೈತ್ರಿಯನ್ನು ವಿರೋಧಿ ಸಿದರು. 

ಜೆಡಿಎಸ್ ನಾಯಕತ್ವ ಹೇಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ದಮನಿಸುತ್ತಿದೆ ಎಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟ ನಾಯಕರು ಮೈತ್ರಿಗಾಗಿ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಕ್ಷೇತ್ರದಲ್ಲಿ ಪಕ್ಷದ ಅವನತಿಗೆ ಕಾರಣವಾಗುತ್ತದೆ. ಯಾವ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಬಾರದು ಎಂದು ವಾದಿಸಿದರು ಎನ್ನಲಾಗಿದೆ.

ದಿನದಂತ್ಯದಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ನಾಯಕರ ಸಭೆಯಲ್ಲೂ ಇದೇ ರೀತಿಯ ವಾದ ಮಂಡನೆಯಾಗಿದೆ. ಸ್ಥಳೀಯ ನಾಯಕರಾದ ಚೆಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್‌ಗೆ ಉತ್ತಮ ಅಸ್ತಿತ್ವವಿದೆ. ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಆತ್ಮಹತ್ಯಾಕಾರಿ ಬೆಳವಣಿಗೆಯಾಗುತ್ತದೆ. ಹೀಗಾಗಿ, ಮೈತ್ರಿಯನ್ನು ವಿಧಾನಸೌಧಕ್ಕೆ ಸೀಮಿತಗೊಳಿಸಬೇಕು ಎಂದು ವಾದಿಸಿದರು.

ಬಳ್ಳಾರಿ ಕ್ಷೇತ್ರಕ್ಕೆ ತೀವ್ರ ಪೈಪೋಟಿ: ನಂತರ ಬಳ್ಳಾರಿ ಕುರಿತ ಚರ್ಚೆಯಲ್ಲಿ ಶಾಸಕರಾದ ನಾಗೇಂದ್ರ, ಭೀಮಾನಾಯ್ಕ, ಕೆ.ಸಿ.ಕೊಂಡಯ್ಯ ಅವರು ಯಾರು ಗೆಲ್ಲಬಹುದು ಎಂಬ ಬಗ್ಗೆ ಚರ್ಚಿಸಿದರು. ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್, ಸ್ಥಳೀಯ ನಾಯಕ ನಟಕಲ್ಲಪ್ಪ ಹಾಗೂ ಲೋಕೇಶ್ ನಾಯಕ್ ಅವರ ಹೆಸರು ಪ್ರಸ್ತಾಪವಾಯಿತು. ಈ ಬಗ್ಗೆ ಸ್ಥಳೀಯ ನಾಯಕರಿಂದ ತೀವ್ರ ವಾದ - ಪ್ರತಿವಾದ ನಡೆದ ಹಿನ್ನೆ
ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಅಭ್ಯರ್ಥಿಯನ್ನು
ಸೂಚಿಸುವಂತೆ ತಿಳಿಸಲಾಯಿತು.

ಶಿವಮೊಗ್ಗ ಕ್ಷೇತ್ರ ಒಕ್ಕಲಿಗ ಅಭ್ಯರ್ಥಿಗೆ?: ಇದಾದ ನಂತರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿದಂತೆ ಸ್ಥಳೀಯ ನಾಯಕರು ಪಾಲ್ಗೊಂಡಿದ್ದರು. ಚರ್ಚೆಯ ವೇಳೆ ಈ ಬಾರಿ ಶಿವಮೊಗ್ಗದಲ್ಲಿ ಜೆಡಿಎಸ್ ಬೆಂಬಲ ದೊರೆತರೆ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆಯಿರುವ ಕಾರಣ ಕಾಂಗ್ರೆಸ್ ನಿಂದ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ತೀರ್ಮಾನಿಸಲಾಯಿತು ಎನ್ನಲಾಗಿದೆ. ಈ ಹಿನ್ನೆಲೆ ಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಮಾಜಿ ಕಾಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರ ಹೆಸರನ್ನು ಪರಿಗಣಿಸಲಾಗಿದ್ದು, ಈ ಪೈಕಿ ಒಬ್ಬರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ನಾಯಕರು ಸೂಚಿಸಿದರು
ಎಂದು ಮೂಲಗಳು ತಿಳಿಸಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!