
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಗೆ ಸರಕಾರ ರಚಿಸಲು ಅಗತ್ಯ ಬಹುಮತ ಬಾರದ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನೊಂದಿಗೆ ಜೆಡಿಎಸ್ ಕೈ ಜೋಡಿಸಿದೆ. ಮೈತ್ರಿ ಸರಕಾರ ರಚನೆಯಾದ ನಂತರ ನಡೆಯುತ್ತಿರುವ ಆರ‌್‌ಆರ್ ನಗರ ಹಾಗೂ ಜಯನಗರ ಚುನಾವಣೆಗೆ ಈ ಮೈತ್ರಿ ಮುಂದುವರಿಯದೇ ಹೋದರೂ, ಮುಂಬರುವ ಲೋಕಸಭಾ ಚುನಾವಣೆಗೆ ಒಂದಾಗಿ ಸ್ಪರ್ಧಿಸಲಿದ್ದೇವೆ, ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಶುಕ್ರವಾರ ಘೋಷಿಸಿವೆ.
ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಬಗ್ಗೆ ಉಭಯ ಪಕ್ಷಗಳು ಒಮ್ಮತಕ್ಕೆ ಬಂದಿದ್ದು, ಶೀಘ್ರದಲ್ಲಿಯೇ ಖಾತೆ ಹಂಚಿಕೆ ಕಸರತ್ತಿಗೆ ವಿದಾಯ ಹಾಡಲಾಗುವುದು. ಜೆಡಿಎಸ್ ಬಳಿ ಹಣಕಾಸು ಖಾತೆ ಇರಲಿದೆ, ಎಂದು ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪತ್ರಿಕಾ ಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಈ ಗೋಷ್ಠಿಯಲ್ಲಿ ವೇಣುಗೋಪಾಲ್ ಜತೆಗಿದ್ದರು.
ಖಾತೆ ಹಂಚಿಕೆ ಬಗ್ಗೆ ಒಮ್ಮತಕ್ಕೆ ಬಂದಿರುವ ಉಭಯ ಪಕ್ಷಗಳು, ಸಮನ್ವಯ ಸಮತಿ ರಚನೆ ಹಾಗೂ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ನಿರ್ಧರಿಸಿದ್ದು, ಕುಮಾರಸ್ವಾಮಿ ಸರಕಾರ ಸದೃಢವಾಗಿರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಎಂದು ಹೇಳಿದರು.
ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಸಮ್ಮಿಶ್ರ ಸರಕಾರದ ಅಂಗ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಗೊಂದಲ ತಕ್ಕಮಟ್ಟಿಗೆ ನಿವಾರಣೆಯಾದಂತೆ ಕಾಣಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.