
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ಹಣ ಶೇಖರಣೆ ಮಾಡಿದ್ದಾರೆ ಎಂಬ ಆಪಾದನೆ ಮೇರೆಗೆ ಚುನಾವಣಾಧಿಕಾರಿಗಳು ಕಾಂಗ್ರೆಸ್ ಅಭ್ಯರ್ಥಿ ವಂಟೇರು ಪ್ರತಾಪ್ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳ ದಾಳಿಗೆ ಬೆಚ್ಚಿಬಿದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ರೆಡ್ಡಿ, ಅವರು ಆತ್ಮಹತ್ಯೆಗೆ ಶರಣಾಗಲು ಮುಂದಾದ ನಾಟಕೀಯ ಬೆಳವಣಿಗೆ ನಡೆದಿದೆ.
ಗಾಜ್ವೆಲ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಿಂದ ಕಣಕ್ಕಿಳಿದಿರುವ ಪ್ರತಾಪ್ ರೆಡ್ಡಿ ಅವರ ನಿವಾಸದಲ್ಲಿ ಮತದಾರರಿಗೆ ಹಂಚಲು ಹಣ ಶೇಖರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು, ಸೋಮವಾರ ರಾತ್ರಿ ರೆಡ್ಡಿ ನಿವಾಸಕ್ಕೆ ದಾಂಗುಡಿ ಇಟ್ಟರು. ಆದರೆ, ಈ ವೇಳೆ ತನಿಖಾಧಿಕಾರಿಗಳ ತಪಾಸಣೆಗೆ ರೆಡ್ಡಿ ಮತ್ತು ಆತನ ಬೆಂಬಲಿಗರು ಅಡ್ಡಿಪಡಿಸಿದರು.
ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರು ತಮ್ಮ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾದರು. ಆದರೆ, ಇದನ್ನು ಪೊಲೀಸರು ತಡೆದರು. ಜೊತೆಗೆ, ರೆಡ್ಡಿ ಮತ್ತು ಆತನ ಬೆಂಬಲಿಗರ ವಿರುದ್ಧ ಆತ್ಮಹತ್ಯೆಗೆ ಯತ್ನ ಮತ್ತು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.