
ರಾಮನಗರ : ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ - ಜೆಡಿಎಸ್ ಮೈತ್ರಿಯಲ್ಲಿ ಎದುರಿಸಿದ್ದು, ಕೇವಲ 2 ಸ್ಥಾನ ಗಳಿಸುವಲ್ಲಿ ಮಾತ್ರವೇ ಯಶಸ್ವಿಯಾದರು.
ಈ ನಿಟ್ಟಿನಲ್ಲಿ ಕೆಲ ಕಾಂಗ್ರೆಸ್ ನಾಯಕರು ಒಳಗೊಳಗೆ ಅಸಮಾಧಾನ ಹೊರಹಾಕುತ್ತಿದ್ದರೆ. ಕೆಲ ನಾಯಕರು ಬಹಿರಂಗವಾಗಿ ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ.
ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಸಿಎಂ ಲಿಂಗಪ್ಪ ಮೈತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವತಂತ್ರ ಬಂದ ನಂತರ ರಾಜ್ಯದಲ್ಲಿ ಇದೇ ಮೊದಲು ಕಾಂಗ್ರೆಸ್ ಗೆ ಈ ಸ್ಥಿತಿ ಬಂದಿದೆ. ಈಗಲಾದರೂ ನಾಯಕರು ಅರ್ಥ ಮಾಡಿಕೊಳ್ಳಬೇಕು. ಮೈತ್ರಿ ಬೇಕೆ, ಸಾಕೇ ಎಂದು ತೀರ್ಮಾನ ಮಾಡಬೇಕು. ಮೈತ್ರಿ ಹೀಗೆ ಮುಂದುವರಿದಲ್ಲಿ ಕಾಂಗ್ರೆಸ್ ಸರ್ವನಾಶವಾಗುವುದು ಖಂಡಿತ ಎಂದರು.
ಇನ್ನು ಇದೇ ವೇಳೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಧಿಕಾರ ಬಂದಾಗ ತಗ್ಗಿ ಬಗ್ಗಿ ನಡೆಯಬೇಕು. ಅಧಿಕಾರ, ಅಂತಸ್ಥು, ಐಶ್ವರ್ಯ ಬಂದಾಗ ತಲೆಬಾಗಿ ನಡೆಯಬೇಕು. ಆಕಸ್ಮಿಕವಾಗಿ ಅಧಿಕಾರ ಸಿಕ್ಕಾಗ ಉಳಿಸಿಕೊಳ್ಳಬೇಕು. ಆದರೆ ಅಧಿಕಾರದಲ್ಲಿದ್ದಾಗ ತಲೆ ಎತ್ತಿ ನಡೆದಾಗ ಇಂತಹ ಸ್ಥಿತಿ ಬರುತ್ತದೆ ಎಂದರು.
ಇನ್ನು ಸುಮಲತಾ ಬೆಂಬಲದ ಬಗ್ಗೆಯೂ ಮಾತನಾಡಿದ ಸಿಎಂ ಲಿಂಗಪ್ಪ, ಮಂಡ್ಯದಲ್ಲಿದ್ದಿದ್ದರೆ ಸಯಮಲತಾಗೆ ಮತ ಹಾಕುತ್ತಿದ್ದೆ. ಅವರ ಗೆಲುವನ್ನು ನಾನು ಅಭಿನಂದಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.