KPCC ಅಧ್ಯಕ್ಷ ಸ್ಥಾನ: ಡಿಕೆಶಿಗೆ ಡಿಚ್ಚಿ ಕೊಟ್ಟ ದಿನೇಶ್ ಗುಂಡೂರಾವ್

Published : Aug 26, 2019, 06:39 PM ISTUpdated : Aug 26, 2019, 06:55 PM IST
KPCC ಅಧ್ಯಕ್ಷ ಸ್ಥಾನ: ಡಿಕೆಶಿಗೆ ಡಿಚ್ಚಿ ಕೊಟ್ಟ ದಿನೇಶ್ ಗುಂಡೂರಾವ್

ಸಾರಾಂಶ

ಒಂದೆಡೆ ಬಿಜೆಪಿಯಲ್ಲಿ ಮಂತ್ರಿಗಾಗಿ ಪೈಪೋಟಿ ನಡೆಯುತ್ತಿದ್ರೆ, ಮತ್ತೊಂದೆಡೆ ವಿರೋಧ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ ಶುರುವಾಗಿದೆ.  ಇದೀಗ ಇಬ್ಬರು ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಹಿರಂಗವಾಗಿದೆ.

ಬೆಂಗಳೂರು, [ಆ.26]: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಪರೋಕ್ಷವಾಗಿ ಹಾಲಿ ಕೆಪಿಸಿಸಿ ಅಧ್ಯಕ್ಷರು ಟಾಂಗ್ ಕೊಟ್ಟಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಹಾಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ನ್ಯೂಸ್ ನಲ್ಲಿ ಬಂದ ತಕ್ಷಣ ಎಲ್ಲವೂ ನಿಜ ಅನ್ನೋಕಾಗಲ್ಲ. ಪತ್ರಿಕೆಗಳಲ್ಲಿ ಪ್ರಚಾರ ತೆಗೆದುಕೊಂಡು ಕೆಪಿಸಿಸಿ ಅಧ್ಯಕ್ಷ ಆಗೋದಕ್ಕಾಗಲ್ಲ. ಎಐಸಿಸಿ ನಾಯಕರು ತೀರ್ಮಾನ ತೆಗೆದುಕೊಳ್ತಾರೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದರು.

ದಿಲ್ಲಿಯಲ್ಲಿ ಡಿಕೆಶಿ : ಟ್ರಬಲ್ ಶೂಟರ್ ಗೆ ಸಿಗುತ್ತಾ KPCC ಚುಕ್ಕಾಣಿ?

ಕೇವಲ ಒಬ್ಬರಿಂದ ಪಕ್ಷ ಸಂಘಟನೆ ಮಾಡ್ತೀವಿ ಅನ್ನೋಕಾಗಲ್ಲ. ಬಿಜೆಪಿಯಲ್ಲಿ ಇರುವ ಗೊಂದಲಗಳನ್ನು ಡೈವರ್ಟ್ ಮಾಡೋದಕ್ಕೆ ನಮ್ಮ ಕಾಂಗ್ರೆಸ್ ನಲ್ಲಿ ಗೊಂದಲಗಳನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿರಬಹುದು. ನಮ್ಮ ನಾಯಕರು ಎಲ್ಲರೂ ಕೂಡ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕೇವಲ ಒಬ್ಬಿಬ್ಬರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನಾನು ಯಾವುದೇ ಲಾಬಿ ನಡೆಸಿಲ್ಲ. ಯಾರಿಗೆ ಆತುರ ಇದೆಯೋ, ಯಾರಿಗೆ ಕಾರು ಹಾಗೂ ಮನೆ ಬೇಕಿದೆಯೋ ಅವರು ಆಗಲಿ. ನನಗೆ ಸ್ವಂತ ಮನೆ ಇದೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕ್ಕೆ ನೀಡಿರುವದನ್ನು ಇಲ್ಲಿ ಸ್ಮರಿಸಬಹುದು.

ಬಿಜೆಪಿಯಲ್ಲಿ ಮಂತ್ರಿ ಸ್ಥಾನಕ್ಕೆ ಗುದ್ದಾಟ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದೆ. ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟುವ ಸಾಧ್ಯತೆಗಳಿವೆ. ಇದಕ್ಕೆ ಪೂರಕವೆಂಬಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ  ಡಿಕೆಶಿ ಚರ್ಚೆ ನಡೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!