
ನವದೆಹಲಿ, (ಸೆ.17):8.5 ಕೋಟಿ ಅಕ್ರಮ ಹಣ ಸಿಕ್ಕ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ (ಸೆ.18) ಅಂದ್ರೆ ಬುಧವಾರಕ್ಕೆ ಮುಂದೂಡಿದೆ.
ಅಲ್ಲಿವರೆಗೆ ಆಸ್ಪತ್ರೆಗೆ ದಾಖಲಿಸುವಂತೆ ED ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಆದೇಶ ಹೊರಡಿಸಿದ್ದಾರೆ.
ಡಿಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದು, ಡಿ.ಕೆ.ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗುವುದು ಅನಿವಾರ್ಯವಾಗಿದೆ. ಆದರೆ ಅವರ ಆರೋಗ್ಯ ಹದಗೆಟ್ಟಿರುವುದರಿಂದ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಇಡಿ ವಿಚಾರಣೆ ಅಂತ್ಯವಾಗಿದ್ದರಿಂದ ಇಂದು (ಮಂಗಳವಾರ) ಡಿಕೆ ಶಿಕುಮಾರ್ ಅವರನ್ನು ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನು ಸಂಘ್ವಿ ಹಾಗೂ ದಯಾನ್ ಕೃಷ್ಣನ್ ವಾದ ಮಂಡಿಸಿದರೆ, ಇಡಿ ಪರ ನಟರಾಜನ್ ವಾದ ಮಂಡಿಸಿದರು.
ಈ ವಾದ-ಪ್ರತಿವಾದ ಆಲಿಸಿದ ರೋಸ್ ಅವೆನ್ಯೂ ಕೋರ್ಟ್‌ನ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್, ನಾಳೆ (ಬುಧವಾರಕ್ಕೆ) ಮುಂದೂಡಿದರು.ಅಲ್ಲಿವರೆಗೂ ಡಿಕೆಶಿಯನ್ನು ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸುವಂತೆ ಆದೇಶ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.