ಕೇಂದ್ರ ಸಚಿವ ಸದಾನಂದ ಗೌಡ ಭೇಟಿಯಾದ ಕೈ ನಾಯಕ ಡಿಕೆಶಿ

By Web DeskFirst Published Jun 18, 2019, 8:29 AM IST
Highlights

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು [ಜೂ.18] :  ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಮತ್ತು ರೈಲ್ವೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ಶೀಘ್ರ ದೊರಕುವಂತಾಗಲು ನೆರವಾಗುವಂತೆ ಮನವಿ ಮಾಡಿದರು.

ಕೃಷ್ಣಾ ನದಿ ನೀರು ಹಂಚಿಕೆ ವಿವಾದ- 2, ಮೇಕೆದಾಟು ಅಣೆಕಟ್ಟು ಯೋಜನೆ ಮತ್ತು ಮಹದಾಯಿ ಕುಡಿಯುವ ನೀರು ಮತ್ತು ಜಲ ವಿದ್ಯುತ್‌ ಉತ್ಪಾದನೆ ಯೋಜನೆಗಳಿಗೆ ಶೀಘ್ರ ಕೇಂದ್ರದ ವಿವಿಧ ಇಲಾಖೆಗಳ ಒಪ್ಪಿಗೆ ಶೀಘ್ರ ದೊರೆಯುವಂತಾಗಲು ನೆರವು ನೀಡಬೇಕು. 

ರಾಜ್ಯದಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳ ಕಾಮಗಾರಿಯ ಚುರುಕುಗೊಳಿಸಬೇಕು. ಬೆಂಗಳೂರು ರೈಲ್ವೆ ನಿಲ್ದಾಣದವನ್ನು ಮೇಲ್ದರ್ಜೆಗೇರಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಬೆಂಗಳೂರು ಸಬ್‌ ಅರ್ಬ್‌ನ್‌ ರೈಲ್ವೆ ಯೋಜನೆ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಸದ ಡಿ.ಕೆ.ಸುರೇಶ್‌ ಹಾಜರಿದ್ದರು.

click me!