
ನವೆದೆಹಲಿ: ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಂಡಿಯೂರಿ ಅಂತಿಮ ನಮನ ಸಲ್ಲಿಸುವ ಮೂಲಕ ಗಮನ ಸೆಳೆದರು.
ಬಿಜೆಪಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್ ಯುವ ಸಂಸದ ಸಿಂಧಿಯಾ ಭಾವುಕರಾಗಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಕುಟುಂಬವು ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದು, ಟ್ವೀಟರ್‌ನಲ್ಲಿಯೂ ಫೋಟೋವನ್ನು ಶೇರ್ ಮಾಡಿ ವಾಜಪೇಯಿ ಅಗಲಿಕೆಗೆ ಸಿಂಧಿಯಾ ಕಂಬನಿ ಮಿಡಿದಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ