
ವೈನಾಡ್(ಜ.30): ಮಹತ್ವದ ಬೆಳವಣಿಗೆಯೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಕೇರಳದ ಕಾಂಗ್ರೆಸ್ ನಾಯಕ ಓಂ ಜಾರ್ಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಓಂ ಜಾರ್ಜ್ 17 ವರ್ಷದ ಅಪ್ರಾಪ್ತ ಬಾಲಕಿಗೆ ಎರಡು ವರ್ಷಗಳಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಾಲಕಿಯ ಪೋಷಕರು ಜಾರ್ಜ್ ಮನೆಯ ಕೆಲಸದಾಳುಗಳಾಗಿದ್ದು, ಎರಡು ವರ್ಷಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜಾರ್ಜ್ ವಿರುದ್ದ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಇನ್ನು ತನ್ನ ನಾಯಕನ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದ್ದಂತೇ ಜಾರ್ಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.