ಜೆಡಿಎಸ್‌ಗೆ ರಾಜೀನಾಮೆ ನೀಡಿದ ಮಾಜಿ ಸಚಿವ| ಮಂಗಳವಾರ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನೆ| ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದ ಮಾಜಿ ಸಚಿವ.
ಬೆಂಗಳೂರು, [ಸೆ.03]: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರಿಗೆ ಇಂದು [ಮಂಗಳವಾರ] ತಮ್ಮ ರಾಜೀನಾಮೆ ರವಾನಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅದ್ಯಾವಾಗ ಜೆಡಿಎಸ್ ಸೇರಿದ್ದರು ಎಂದು ಗಾಬರಿಯಾಗಬೇಡಿ.
2019ರ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಆದ್ರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗಿತ್ತು.
ಆ ವೇಳೆ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಸೇರಿ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಸೋಲುಕಂಡಿದ್ದರು.