ಬಿಜೆಪಿ ಡಿನ್ನರ್‌ಗೆ ರಮೇಶ್‌ ಜಾರಕಿಹೊಳಿ!

Published : Dec 20, 2018, 07:45 AM IST
ಬಿಜೆಪಿ ಡಿನ್ನರ್‌ಗೆ ರಮೇಶ್‌ ಜಾರಕಿಹೊಳಿ!

ಸಾರಾಂಶ

ಕಲಾಪಕ್ಕೆ ಗೈರಾಗಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರ ಅಚ್ಚರಿ ಎಂಬಂತೆ ಬಿಜೆಪಿ ನಾಯಕರು ಆಯೋಜಿಸಿದ್ದ ಔತಣ ಕೂಟದಲ್ಲಿ ಪಾಲ್ಗೊಂಡಿದ್ದಾರೆ. ಬಿಜೆಪಿ ಮುಖಂಡರೊಂದಿಗೆ ಕೂತು ಊಟ ಸವಿದಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಬೆಳಗಾವಿ :  ಸಂಪುಟ ಸಭೆ, ಹಲವು ದಿನಗಳ ಕಾಲ ಕಲಾಪಕ್ಕೆ ಗೈರಾಗಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರ ಅಚ್ಚರಿ ಎಂಬಂತೆ ಬಿಜೆಪಿ ನಾಯಕರು ಆಯೋಜಿಸಿದ್ದ ಔತಣ ಕೂಟದಲ್ಲಿ ಪಾಲ್ಗೊಂಡಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್‌ ಮಂಗಳವಾರ ಆಯೋಜಿಸಿದ್ದ ಔತಣಕೂಟದಿಂದ ದೂರವುಳಿದಿದ್ದ ರಮೇಶ್‌ ಜಾರಕಿಹೊಳಿ ಈಗ ದಿಢೀರ್‌ ಆಗಿ ಬಿಜೆಪಿ ಮುಖಂಡರೊಂದಿಗೆ ಕೂತು ಊಟ ಸವಿದಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ವಿಧಾನ ಪರಿಷತ್ತಿನ ಪ್ರತಿಪಕ್ಷದ ಸಚೇತಕ ಮಹಾಂತೇಶ ಕವಟಗಿಮಠ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಶಾಸಕ ಹಾಗೂ ವಿಧಾನ ಪರಿಷತ್‌ ಸದಸ್ಯರಿಗಾಗಿ ಆಯೋಜಿಸಿದ್ದ ಔತಣಕೂಟದಲ್ಲಿ ಸಚಿವ ರಮೇಶ ಜಾರಕಿಹೊಳಿ ಪಾಲ್ಗೊಂಡರು. ನಂತರ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಕುಳಿತು ಭೋಜನ ಸವಿದು ತೆರಳಿದರು ಎಂದು ಮೂಲಗಳು ತಿಳಿವೆ.

ಡಿ.18ರಂದು ನಡೆದ ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಹಾಜರಾಗದೆ ಅನಾರೋಗ್ಯದ ಕಾರಣ ನೀಡಿ ಸಭೆಯಿಂದ ದೂರ ಉಳಿದಿದ್ದ ಸಚಿವ ರಮೇಶ ಅವರು, ಅನಾರೋಗ್ಯದ ಕಾರಣ ನೀಡಿದ್ದರು. ಮಾತ್ರವಲ್ಲ, ಎರಡು ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ರಮೇಶ್‌ ಜಾರಕಿಹೊಳಿ ಅವರು ಬುಧವಾರ ಕೇವಲ 15 ನಿಮಿಷ ಕಾಲ ಕಲಾಪದಲ್ಲಿ ಭಾಗಿಯಾಗಿದ್ದರು. ಆದರೆ, ಸಚಿವ ಸಂಪುಟ ಸಭೆಗೆ ಗೈರಾಗಿದ್ದರು.

ಏತನ್ಮಧ್ಯೆ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಬುಧವಾರ ಆಯೋಜಿಸಿದ್ದ ಔತಣಕೂಟದಿಂದಲೂ ರಮೇಶ್‌ ದೂರವುಳಿದಿದ್ದರು. ಈಗ ಬಿಜೆಪಿ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ