
ದೆಹಲಿ : 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, 34 ವರ್ಷಗಳ ನಂತರ ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾಂಗ್ರೆಸ್ ಮುಖಂಡ 73 ವರ್ಷದ ಸಜ್ಜನ್ ಕುಮಾರ್ ದೋಷಿ ಎಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿದೆ.
1984ರಲ್ಲಿ ದಿಲ್ಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಗಲಭೆ ನಡೆದಿದ್ದು, ಈ ವೇಳೆ ಐವರ ಕೊಲೆ ನಡೆದಿತ್ತು. ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ ನ್ಯಾ. ಎಸ್ ಮುರುಳಿಧರ್ ಹಾಗೂ ನ್ಯಾ. ವಿನೋದ್ ಗೋಯಲ್ ಅವರಿದ್ದ ಪೀಠ ತೀರ್ಪು ಪ್ರಕಟಿಸಿದೆ. ಅಲ್ಲದೇ ಡಿಸೆಂಬರ್ 31ರ ಒಳಗೆ ಸಜ್ಜನ್ ಕುಮಾರ್ ಶರಣಾಗಬೇಕು ಎಂದು ಕೋರ್ಟ್ ಆದೇಶಿಸಿದೆ.
ಇಂದಿರಾ ಗಾಂಧಿ ಹತ್ಯೆಗೆ ಪ್ರತಿಕಾರವಾಗಿ ರಾಜಕೀಯ ಪ್ರೇರಿತ ಹಿಂಸಾಚಾರ ನಡೆದಿತ್ತು. ಈ ಹಿಂದೆ 2013ರಲ್ಲಿ ಕೆಳಹಂತದ ನ್ಯಾಯಾಲಯ ಸಜ್ಜನ್ ಕುಮಾರ್ ದೋಷಿ ಎಂದು ನೀಡಿದ್ದ ತೀರ್ಪನ್ನೇ ಎತ್ತಿ ಹಿಡಿದಿರುವ ದಿಲ್ಲಿ, ಕೋರ್ಟ್ ಇದೀಗ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಇನ್ನು ಸಜ್ಜನ್ ಕುಮಾರ್ ಜೊತೆಗೆ ಉಳಿದ ಅಪರಾಧಿಗಳಿಗೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದ ಹಿನ್ನೆಲೆಯಲ್ಲಿ 1 ಲಕ್ಷ ದಂಡ ವಿಧಿಸಿದೆ. ಅಲ್ಲದೇ ಸಜ್ಜನ್ ಕುಮಾರ್ ಅವರಿಗೆ 5 ಲಕ್ಷ ರು. ದಂಡ ವಿಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.