
ಬೆಂಗಳೂರು [ಜು.19] : ರಾಜ್ಯ ಸರ್ಕಾರದ ಹೈ ಡ್ರಾಮಾ ಮುಂದುವರಿದಿದೆ. ಇತ್ತ ವಿಶ್ವಾಸಮತ ಯಾಚನೆಗೆ ಗವರ್ನರ್ ವಜುಭಾಯ್ ವಾಲಾ ಡೆಡ್ ಲೈನ್ ಮೇಲೆ ಡೆಡ್ ಲೈನ್ ನೀಡುತ್ತಿದ್ದಾರೆ.
ಇತ್ತ ಬಿಜೆಪಿ ನಾಯಕರು ಮೈತ್ರಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವ್ಯರ್ಥ ಚರ್ಚೆಯ ಮೂಲಕ ಸಮಯ ಮುಂದೂಡಲಾಗುತ್ತಿದೆ ಎಂದು ಪದ್ಮನಾಭನಗರ ಶಾಸಕ, ಬಿಜೆಪಿ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರ ಇದೆಯೋ ಇಲ್ಲವೋ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದು, ಈ ವೇಳೆ ಜಮೀರ್ ಅಹಮದ್ ಮಧ್ಯ ಪ್ರವೇಶಿಸಿ ಮರು ಪ್ರತಿಕ್ರಿಯೆ ನೀಡಿದರು.
ರಾಜ್ಯ ರಾಜಕೀಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜಮೀರ್ ಸರ್ಕಾರ ಇದೆ ಅಣ್ಣಾ.. ಸರ್ಕಾರ ಇದೆ ಎಂದು ನಗುತ್ತಾ ಹೇಳಿ ತೆರಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.