
ನವದೆಹಲಿ/ ಚೆನ್ನೈ (ಸೆ,10): ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ತಲೆದೋರಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿರುವ ಬಗ್ಗೆ ಕಾಂಗ್ರೆಸ್ ನಾಯಕರೇ ಅಪಸ್ವರ ಎತ್ತಿದ್ದಾರೆ..
ಸುಪ್ರೀಂ ಕೋರ್ಟ್ ಒಮ್ಮೆ ಆದೇಶವನ್ನು ನೀಡಿದ ಬಳಿಕ, ಅದನ್ನು ತಡೆಯುವ ನೇರ ಅಥವಾ ಪರೋಕ್ಷ ಪ್ರಯತ್ನಗಳು ಅಸಾಂವಿಧಾನಿಕವಾಗಿರುವುದು ಎಂದು ಕಾಂಗ್ರೆಸ್ ಮುಖಂಡ ಅಭಿಶೇಕ್ ಮನು ಸಿಂಘ್ವಿ ಹೇಳಿದ್ದಾರೆಂದು ವರದಿಯಾಗಿದೆ.
ಅದೇ ವೇಳೆ ತಮಿಳುನಾಡಿನ ಕಾಂಗ್ರೆಸ್ ಮುಖಂಡರು ಕೂಡಾ, ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿಗೆ ಪತ್ರ ಬರೆದು ಮುಖ್ಯಮಂತ್ರಿಗಳ ಸಭೆ ಕರೆಯಲು ಮನವಿ ಮಾಡುವುದು ಸರಿಯಲ್ಲ, ಎಂದಿದ್ದಾರೆ.
ಕಾವೇರಿ ವಿಚಾರವು ಈಗಾಗಲೇ ಸುಪ್ರೀಂ ಕೋರ್ಟ'ನಲ್ಲಿರುವುದರಿಂದ, ಪ್ರಧಾನಿ ಮಧ್ಯಪ್ರವೇಶಿಸಲು ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ಸೂಚಿಸಿದರೆ ಮಾತ್ರ ಪ್ರಧಾನಿ ಸಭೆ ಕರೆಯಬಹುದೇ ಹೊರತು ಮುಖ್ಯಮಂತ್ರಿ ಮನವಿಯ ಮೇರೆಗೆ ಅಲ್ಲ, ಎಂದು ಕಾಂಗ್ರೆಸ್ ಮುಖಂಡ ಪೀಟರ್ ಅಲ್ಫೋನ್ಸ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.