
ಬೆಂಗಳೂರು (ಜೂ. 12): ಕಾಂಗ್ರೆಸ್ ನಲ್ಲಿ ಅತೃಪ್ತರ ಬಂಡಾಯ ತಣ್ಣಗಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಇಂದು ಕಾಂಗ್ರೆಸ್’ನ ಎರಡನೇ ಅತೃಪ್ತ ಬಣದಿಂದ ಮಹತ್ವದ ಸಭೆ ನಡೆಯಲಿದೆ. ಮಾಜಿ ಸಚಿವ, ಹಿರಿಯ ಶಾಸಕ ಹೆಚ್ ಕೆ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಶಾಸಕರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ವರಿಷ್ಠರಿಗೆ ಹಾಗೂ ಹೈ ಕಮಾಂಡ್ ನಾಯಕರಿಗೆ ಸ್ಪಷ್ಟ ಸಂದೇಶ ಕೊಡುವ ನಿಟ್ಟಿನಲ್ಲಿ ಸಭೆ ನಡೆಸಲಾಗುತ್ತದೆ.
ಬಾಕಿ ಉಳಿದ ಆರು ಸ್ಥಾನಗಳಲ್ಲಿ ಅವಕಾಶ ಪಡೆಯುವುದು, ತಮ್ಮನ್ನು ಕಡೆಗಣಿಸಿದ ಹೈ ಕಮಾಂಡ್ ನಾಯಕರಿಗೆ ಸ್ಪಷ್ಟ ಸಂದೇಶ ಕೊಡುವುದರ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ. ಎರಡನೇ ಅತೃಪ್ತ ಬಣದ ಕಾಂಗ್ರೆಸ್ ಶಾಸಕರ ಈ ನಡೆ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.