
ಬೆಂಗಳೂರು: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನವೊಲಿಕೆಗೆ ಎರಡು ಹಂತದ ಸಭೆ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತು ವಾರಿ ಕೆ.ಸಿ. ವೇಣುಗೋಪಾಲ್ ಕೊನೆಗೂ ಮನವೊಲಿಸಲು ಯಶಸ್ವಿಯಾಗಿದ್ದಾರೆ.
ರಾಹುಲ್ ಗಾಂಧಿ ಭಾಗವಹಿಸಲಿರುವ ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶದ ಸಿದ್ಧತೆಯಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ತಮಗೆ ಪ್ರಾಮುಖ್ಯತೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸತೀಶ್ ಜಾರಕಿಹೊಳಿ ಮುನಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಮುಂದುವರೆಯುವ ಬಗ್ಗೆ ನಿರ್ಧರಿಸಲು ಬುಧವಾರ ಬೆಂಬಲಿಗರ ಸಭೆ ಕರೆದಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಒಂದು ಗಂಟೆ ನಿರಂತರ ಚರ್ಚೆ ಮಾಡಿದರು.
ಬಳಿಕ ಮತ್ತೊಂದು ಸುತ್ತಿನ ಪ್ರಯತ್ನವಾಗಿ ಮಧ್ಯಾಹ್ನ ಮುಖ್ಯಮಂತ್ರಿಗಳ ನಿವಾಸ ಕಾವೇರಿಗೆ ಕರೆದುಕೊಂಡು ಹೋಗಿ 1 ಗಂಟೆ ಕಾಲ ಸಿಎಂ ಸಮ್ಮುಖದಲ್ಲಿ ಚರ್ಚೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.