ಜೆಡಿಎಸ್ ತೊರೆದವರಿಗೆ ಈಗ ಕಾಂಗ್ರೆಸ್ ಬಗ್ಗೆ ಅಸಮಾಧಾನ

By Web DeskFirst Published Oct 23, 2018, 9:54 AM IST
Highlights

ಕಾಂಗ್ರೆಸ್ ಮುಖಂಡರು, ಜೆಡಿಎಸ್ ಜತೆ ಹೋರಾಟ ಮಾಡಿಕೊಂಡು ಬಂದಿದ್ದು, ತಾವು ಪಕ್ಷದ ತೀರ್ಮಾನದ ಪ್ರಕಾರ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚಿಸಬೇಕೆ ಅಥವಾ ಬೇಡವೇ ಎಂಬುದರ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ. 

ಬೆಂಗಳೂರು : ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಂಡ್ಯ, ರಾಮನಗರ ಹಾಗೂ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕರು ಚಲುವರಾಯಸ್ವಾಮಿ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.

ಸೋಮವಾರ ನಗರದ ಶಾಂಘ್ರಿಲಾ ಹೋಟೆಲ್‌ನಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು, ಜೆಡಿಎಸ್ ಜತೆ ಹೋರಾಟ ಮಾಡಿಕೊಂಡು ಬಂದ ತಾವು ಪಕ್ಷದ ತೀರ್ಮಾನದ ಪ್ರಕಾರ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಸಭೆ ನಡೆಸಿದರು. ಈ ವೇಳೆ ಪಕ್ಷದ ತೀರ್ಮಾನಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮಗೆ ಆಗುವ ಅನ್ಯಾಯವನ್ನು ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮುಂದಿಡಬೇಕು ಎಂದು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. 

ಮುಖಂಡರ ಅಸಮಧಾನ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಗಡಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ, ನನ್ನನ್ನು ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಯಾರೂ ಕರೆದಿಲ್ಲ. ಕರೆದರೆ ತಾನೇ ಹೋಗುವುದು. ಅವರಿಗೆ ಬೇಡ ಎಂದರೆ ನಾನಾಗಿ ನಾನು ಏಕೆ ಹೋಗಲಿ ಎಂದು ಪ್ರಶ್ನಿಸಿದರು. ಅಲ್ಲದೆ ಜೆಡಿಎಸ್ ಪರ ಪ್ರಚಾರ ಮಾಡಲು ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರೇ ಸಾಕು. ನಾವೆಲ್ಲಾ ಅಗತ್ಯವೇ ಇಲ್ಲ. ನೀವು ಇದನ್ನು ಹೇಗೆ ಬೇಕಾದರೂ ಅರ್ಥೈಸಿಕೊಳ್ಳಬಹುದು ಎಂದು ಪರೋಕ್ಷವಾಗಿ ಜೆಡಿಎಸ್ ಬಗೆಗಿನ ಅಸಮಧಾನ ಹೊರಹಾಕಿದರು. 

click me!