ಗೋವಾದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ, ಕಮಲ ಹಿಡಿದ 10 ‘ಕೈ’ ಶಾಸಕರು

Published : Jul 10, 2019, 11:48 PM ISTUpdated : Jul 10, 2019, 11:52 PM IST
ಗೋವಾದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ, ಕಮಲ ಹಿಡಿದ 10 ‘ಕೈ’ ಶಾಸಕರು

ಸಾರಾಂಶ

ಕರ್ನಾಟಕದ ರಾಜಕೀಯ ರಣಾಂಗಣ. ಹೈಡ್ರಾಮಾದ ವಾಸನೆ ಪಕ್ಕದ ಗೋವಾಕ್ಕೂ ತಾಗಿದೆ. ಗೋವಾದಲ್ಲಿಯೂ ಕ್ಷಿಪ್ರ ರಾಜಕೀಯ ಕ್ರಾಂತಿ ಆಗಿಹೋಗಿದೆ.

ಪಣಜಿ[ಜು. 10]  ಗೋವಾ ಪ್ರತಿಪಕ್ಷ ನಾಯಕ ಚಂದ್ರಕಾಂತ್ ಕವಲೇಕರ್ ನೇತೃತ್ವದಲ್ಲಿ 10 ಕಾಂಗ್ರೆಸ್ ಶಾಸಕರು ಬುಧವಾರ ಆಡಳಿತರೂಢ ಬಿಜೆಪಿ ಜೊತೆ ವಿಲೀನವಾಗಿದ್ದಾರೆ.

ಒಟ್ಟು 15 ಕಾಂಗ್ರೆಸ್ ಶಾಸಕರ ಪೈಕಿ 10 ಶಾಸಕರ ಬಣ ಇಂದು ಬಿಜೆಪಿಯೊಂದಿಗೆ ವಿಲೀನವಾಗಿದೆ. ಇದರೊಂದಿಗೆ 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯೆ 5ಕ್ಕೆ ಕುಸಿದಿದ್ದು, ಆಡಳಿತರೂಢ ಬಿಜೆಪಿ ಬಲ 17ರಿಂದ 27ಕ್ಕೆ ಏರಿಕೆಯಾಗಿದೆ. 2ರಲ್ಲಿ 3 ಭಾಗ ಶಾಸಕರು ಪಕ್ಷಾಂತರ ಮಾಡಿರುವುದರಿಂದ ಪಕ್ಷಾಂತರ ನಿಷೇಧ ಕಾಯಿದೆಯಿಂದ ವಿನಾಯಿತಿಪಡೆದುಕೊಂಡಿದ್ದಾರೆ. 

ವಿಧಾನಸೌಧದಲ್ಲಿ ಹೊಡಿ-ಬಡಿ,  ರಾಜೀನಾಮೆ ಕೊಟ್ಟ ಸುಧಾಕರ್‌ಗೆ ದಿಗ್ಬಂಧನ

ಕವಲೇಕರ್ ನೇತೃತ್ವದಲ್ಲಿ 10 ಕಾಂಗ್ರೆಸ್​ ಶಾಸಕರು ಇಂದು ಸಂಜೆ ಸ್ಪೀಕರ್ ರಾಜೇಶ್ ಪಟ್ನಾಕರ್  ಅವರನ್ನು ಭೇಟಿ ಮಾಡಿ, ವಿಲೀನ ಪತ್ರ ನೀಡಿದ್ದಾರೆ. ಚಂದ್ರಕಾಂತ್ ಕವಲೇಕರ್, ಫಿಲಿಪ್ ನೆರಿ ರಾಡ್ರಿಗೆಸ್, ಅಟನಾಸಿಯೋ ಆನ್ಸೆರಾಟ್ಟೆ, ಜೆನ್ನಿಫರ್ ಮಾನ್ಸೆರಾಟ್ಟೆ, ಫ್ರಾನ್ಸಿಸ್ ಸಿಲ್ವೇರಾ, ಕ್ಲಿಯೋಫೇಷಿಯೋ ಡಯಾಸ್, ವಿಲ್​ಫ್ರೆಡ್ ಡಿಸಾ, ನೀಲಕಂಠ್ ಹಲರನಕರ್, ಇಸಿಡೋರ್ ಫರ್ನಾಂಡಿಸ್ ಅವರು ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ