
ಬೆಂಗಳೂರು (ಫೆ.23): ಶಾಸಕರ ಹ್ಯಾರಿಸ್ ಪುತ್ರನ ಗೂಂಡಗಿರಿಯ ಬಳಿಕ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ ಪ್ರಕರಣ ಬಯಲಾಗಿದೆ. ಪ್ರತಿಭಟನೆ ಸಂಧರ್ಭದಲ್ಲಿ ಅಡ್ಡ ಬಂದಿದಕ್ಕೆ ವ್ಯಕ್ತಿಯೋರ್ವನಿಗೆ ಹಿಗ್ಗಾ ಮುಗ್ಗಾ ಥಳಿಸಿರುವ ವಿಡಿಯೋ ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ಕಾಂಗ್ರೆಸ್ ಶಾಸಕ ಸಿ ಎಸ್ ಶಿವಳ್ಳಿ ಸಹೋದರ ಮತ್ತು ಆತನ ಸಹಚರರು ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಸಿ ಎಸ್ ಶಿವಳ್ಳಿ ಸಹೋದರ ಅಡಿವೆಪ್ಪಾ ಶಿವಳ್ಳಿ ಮತ್ತು ಸಹಚರರಿಂದ ಈ ಗೂಂಡಗಿರಿ ನಡೆದಿದೆ. ಮೂರ್ನಾಲ್ಕು ಜನರು ಸೇರಿ ಮನಬಂದಂತೆ ವ್ಯಕ್ತಿಗೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.