
ಬೆಲ್‌ಗ್ರೇಡ್(ಅ.17): ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್, ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಮಾನ ಹರಾಜು ಹಾಕಿದ್ದಾರೆ.
ಸೆರ್ಬಿಯಾದಲ್ಲಿ ನಡೆದ ವಿಶ್ವಸಂಸ್ಥೆ ವ್ಯಾವಹಾರಿಕ ಸಭೆಯಲ್ಲಿ ಭಾರತದ ಸಂಸತ್ತಿನ ನಿಯೋಗದ ಪರವಾಗಿ ಮಾತನಾಡಿದ ಶಶಿ ತರೂರ್, ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಹೇಳುತ್ತಿರುವ ಸುಳ್ಳುಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟರು.
ಪಾಕಿಸ್ತಾನ ಪ್ರಾಯೋಜಿತ ಉಗ್ರ ಕೃತ್ಯಗಳನ್ನು ಕಾಶ್ಮೀರದ ತಲೆಗೆ ಕಟ್ಟುವುದು ಸರಿಯಲ್ಲ ಎಂದು ಹೇಳಿರುವ ತರೂರ್, ಭಯೋತ್ಪಾದನೆಗೆ ಸಂಬಂಧಿಸಿದ ಎಲ್ಲ ದುಷ್ಕೃತ್ಯಗಳಿಗೆ ಪಾಕಿಸ್ತಾನವೇ ನೇರ ಹೊಣೆ ಎಂದು ಹರಿಹಾಯ್ದಿದ್ದಾರೆ.
ಭಾರತದ ವಿರುದ್ಧ ಸದಾಕಾಲ ದ್ವೇಷ ಸಾಧಿಸುವ ಪಾಕಿಸ್ತಾನ, ನಮ್ಮ ಆಂತರಿಕ ವಿಚಾರದಲ್ಲೂ ಹಸ್ತಕ್ಷೇಪ ಮಾಡುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತರೂರ್ ಕಿಡಿಕಾರಿದ್ದಾರೆ.
ಕಣಿವೆ ರಾಜ್ಯ ಭಾರತದ ಅವಿಭಾಜ್ಯ ಅಂಗವಾಗಿದ್ದು, ಜಾಗತಿಕ ವೇದಿಕೆಗಳಲ್ಲಿ ಪಾಖಿಸ್ತಾನ ಮೊಸಳೆ ಕಣ್ಣೀರು ಸುರಿಸುತ್ತಾ ನಾಟಕವಾಡುತ್ತಿದೆ ಎಂದು ತರೂರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದೇ ವೇಳೆ ಆರ್ಟಿಕಲ್ 370 ರದ್ದತಿಗೆ ಭಾರತದ ವಿಪಕ್ಷಗಳ ವಿರೋಧ ಇದೆ ಎಂಬ ಪಾಕಿಸ್ತಾನದ ಮಾತಿಗೆ ಕೆಂಡಾಮಂಡಲವಾದ ಕಾಂಗ್ರೆಸ್ ಸಂಸದ, ನಾನು ಭಾರತದ ಅತೀ ದೊಡ್ಡ ಪಕ್ಷದ ಸಂಸದನಾಗಿದ್ದು, ನಮ್ಮ ಹೋರಾಟವನ್ನು ಪ್ರಜಾಪ್ರಭುತ್ವದ ನಿಯಮದಂತೆ ಸಂಸತ್ತಿನಲ್ಲಿ ನಡೆಸುವ ಹಕ್ಕು ಹೊಂದಿದ್ದೇವೆ ಎಂದು ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.