
ಜೈಪುರ(ಅ.6): ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದ್ದು, ಅಧಿಕಾರಕ್ಕಾಗಿ ಸಮಾಜ ಒಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಇಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಅಜ್ಮೇರ್‌ನಲ್ಲಿ ಬಿಜೆಪಿ ಪ್ರಚಾರಾಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ದೇಶದ ಜನರು ತಮಗೆ ಅಭಿವೃದ್ಧಿ ರಾಜಕಾರಣ ಬೇಕೋ ವೋಟ್ ಬ್ಯಾಂಕ್ ರಾಜಕಾರಣ ಬೇಕೋ ಎಂಬುದನ್ನು ತೀರ್ಮಾನಿಸಬೇಕಿದೆ ಎಂದರು.
ಕಾಂಗ್ರೆಸ್ ಕಳೆದ 60 ವರ್ಷಗಳಿಂದ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಇದರಿಂದ ದೇಶದ ಅಭಿವವೃದ್ಧಿ ಸಾಧ್ಯವಿಲ್ಲ. ಆದರೆ ಬಿಜೆಪಿ ಜನರ ಒಳತಿಗಾಗಿ, ದೇಶದ ಆರ್ಥಿಕಾಭಿವೃದ್ಧಿಯನ್ನು ಸಾಧಿಸುವುದಕ್ಕೆ ಕಟಿಬದ್ಧವಾಗಿದ್ದು ಆ ದಿಶೆಯಲ್ಲಿ ಹೆಜ್ಜೆ ಇರಿಸಿದೆ ಎಂದು ಪ್ರಧಾನಿ ಹೇಳಿದರು.
ಕಾಂಗ್ರೆಸ್ ಪಕ್ಷ ವಂಶಾಡಳಿತದ ಪಕ್ಷವಾಗಿ ಮುಂದುವರಿಯುತ್ತಿದೆ ಎಂದು ಟೀಕಿಸಿದ ಮೋದಿ, ರಾಜಸ್ಥಾನದ ಮತ್ತು ದೇಶದ ಜನರು ನಮ್ಮ ಹೈಕಮಾಂಡ್ ಆಗಿದ್ದಾರೆ. ಕಾಂಗ್ರೆಸ್ ನ ಹೈಕಮಾಂಡ್ ಒಂದು ಕುಟುಂಬವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.