
ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಾಲೀಮು ಆರಂಭಿಸಿದ್ದು, ಶುಕ್ರವಾರ ಉಡುಪಿ-ಚಿಕ್ಕ ಮಗಳೂರು ಹಾಗೂ ದಕ್ಷಿಣ ಕನ್ನಡ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಈ ವೇಳೆ ಉಡುಪಿ- ಚಿಕ್ಕ ಮಗಳೂರು ಲೋಕ ಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಬಿ.ಕೆ. ಹರಿಪ್ರಸಾದ್ ಮತ್ತು ದಕ್ಷಿಣ ಕನ್ನಡಕ್ಕೆ ರಮಾನಾಥ ರೈ ಹೆಸರು ಪ್ರಸ್ತಾಪವಾಗಿದೆ.
ಪಕ್ಷದ ರಾಜ್ಯ ಪ್ರಭಾರಿ ಕೆ.ಸಿ. ವೇಣುಗೋಪಾಲ ಹಾಗೂ ಇತರ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಪಕ್ಷ ಸಂಘಟನೆ, ಚುನಾವಣಾ ತಯಾರಿ ಬಗ್ಗೆ ಚರ್ಚೆ ನಡೆಯಿತು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಬಿ.ಕೆ.ಹರಿಪ್ರಸಾದ್ ಅವರ ಹೆಸರು ಪ್ರಸ್ತಾಪವಾಯಿತು.
ದಕ್ಷಿಣ ಕನ್ನಡಕ್ಕೆ ‘ರೈ’ ಸೈ: ಇನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹೊಣೆಯನ್ನು ಮಾಜಿ ಸಚಿವ ರಮಾನಾಥ ರೈ ಅವರಿಗೆ ವಹಿಸಲಾಗಿದೆ. ಈ ಮಧ್ಯೆ, ಕ್ಷೇತ್ರ ದಿಂದ ರಮಾನಾಥ ರೈ ಅವರನ್ನೇ ಕಣಕ್ಕಿಳಿಸುವಂತೆ ಜಿಲ್ಲೆಯ ನಾಯಕರು ಬೆಂಬಲಿಸಿದ್ದಾರೆ. ಹಾಸನದಲ್ಲಿ ಮೈತ್ರಿಗೆ ವಿರೋಧ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಹಾಸನ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಬಾರದು. ಒಂದು ವೇಳೆ ಬಿಟ್ಟುಕೊಟ್ಟರೆ ಅಲ್ಲಿ ಪಕ್ಷ ಉಳಿಯುವುದು ಕಟ್ಟವಾಗುತ್ತದೆ ಎಂದು ಮಾಜಿ ಸಚಿವ ಎ. ಮಂಜು ನೇತೃತ್ವದ ಸ್ಥಳೀಯ ನಾಯಕರು ಪಕ್ಷದ ನಾಯಕರಿಗೆ ಒತ್ತಡ ಹಾಕಿದ್ದಾರೆ. ಆದರೂ, ನಾಯಕರು ಈ ಬಗ್ಗೆ ಚುನಾವಣೆ ವೇಳೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರುವುದಾಗಿ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.