
ನವದೆಹಲಿ(ಸೆ.27): ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇವತ್ತು ಸುಪ್ರೀಂಕೋರ್ಟ್`ನಲ್ಲಿ ವಿಚಾರಣೆ ನಡೆಯುತ್ತಿದೆ. ಕಾವೇರಿ ತೀರ್ಪನ್ನ ಮಾರ್ಪಾಡು ಮಾಡುವಂತೆ ಕರ್ನಾಟಕ ಸಲ್ಲಿಸಿರುವ ಅರ್ಜಿ ಮತ್ತು ನೀರು ಬಿಡುವವರೆಗೂ ರ್ನಾಟಕದ ವಾದ ಆಲಿಸದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್`ನಿಂದ ನ್ಯಾಯಾಂಗ ನಿಂದನೆಯ ತೂಗುಗತ್ತಿ ಬೀಳುತ್ತಾ ಎಂಬ ವಾದಗಳು ಕೇಳಿಬರುತ್ತಿವೆ.
ಈ ಮಧ್ಯೆ, ಕಾವೇರಿ ವಿವಾದ ಬಗೆಹರಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ, ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿರುವ ಕರ್ನಾಟಕದ ಸಂಸದರು ಪ್ರಧಾನಿ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದ್ದಾರೆ. ಕಾವೇರಿ ನಮ್ಮದು, ನಮಗೆ ಕುಡಿಯುವ ನೀರು ಬೇಕು ಮೋ ಜಿ ಎಂದು ಘೋಷಣೆ ಕೂಗುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.