
ಹೈದರಾಬಾದ್: ಚುನಾವಣಾ ರಹಣ ಕಹಳೆ ಮೊಳಗಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಅವರನ್ನು ಮಣಿಸಲು ಕಾಂಗ್ರೆಸ್ ಹಾಗೂ ಅದರ ಎದುರಾಳಿ ಪಕ್ಷ ತೆಲುಗುದೇಶಂ ಏನು ಮಾಡುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಒಂದು ವೇಳೆ, ಕೆಸಿಆರ್ ಅವರನ್ನು ಸೋಲಿಸಲೇ ಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್- ಟಿಡಿಪಿ ಏನಾದರೂ ಕೈಜೋಡಿಸಿದರೆ ರಾವ್ ಅವರಿಗೆ ಚುನಾವಣೆ ತುಸು ಕಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಅಂತಹ ಪ್ರಯತ್ನವೊಂದು ತೆಲಂಗಾಣದಲ್ಲಿ ಈಗಾಗಲೇ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರತಿಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಕೆಸಿಆರ್ ಅವರನ್ನು ಕಟ್ಟಿ ಹಾಕುವುದು ಕಷ್ಟ. ಹೀಗಾಗಿ ಹಿಂದಿನ ವೈರತ್ವ ಮರೆತು ಒಂದಾಗಲು ಕಾಂಗ್ರೆಸ್ ಹಾಗೂ ಟಿಡಿಪಿ ಪ್ರಯತ್ನಿಸುತ್ತಿವೆ.
ಪ್ರತಿಪಕ್ಷಳ ಮಹಾಕೂಟವನ್ನು ರಚಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಈಗಾಗಲೇ ಕಾರ್ಯಪ್ರವೃತ್ತ ವಾಗಿದ್ದು, ಅದರ ಸ್ಥಳೀಯ ನಾಯಕರು ಈಗಾಗಲೇ ಟಿಡಿಪಿ, ತೆಲಂಗಾಣ ಜಂಟಿ ಕ್ರಿಯಾ ಸಮಿತಿ, ತೆಲಂಗಾಣ ಜನ ಸಮಿತಿ, ಸಿಪಿಐ, ಸಿಪಿಎಂ, ಬಿಎಸ್ಪಿ, ಜತೆಗೆ ಮಾತುಕತೆಯಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.